ಹಾವೇರಿ: ಬಿಜೆಪಿಯ ಭದ್ರಕೋಟೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿನಿದಿಸುತ್ತಿದ್ದ ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ.
ಕಾಂಗ್ರೆಸ್ ಅಭ್ಯರ್ಥಿ ಅಲ್ಪಸಂಖ್ಯಾತ ನಾಯಕ ಯಾಸಿರ್ ಖಾನ್ ಪಠಾಣ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಮತ್ತು ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಅವರಿಗೆ ಹೀನಾಯ ಸೋಲಾಗಿದೆ. ಈ ಮೂಲಕ ದಶಕಗಳಿಂದ ಬಿಜೆಪಿ ತೆಕ್ಕೆಯಲ್ಲಿದ್ದ ಭದ್ರಕೋಟೆಗೆ ಕಾಂಗ್ರೆಸ್ ಶಾಕ್ ನೀಡಿದೆ.
ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಕಳೆದ ಬಾರಿ ಸೋತಿದ್ದರು. ಆದರೆ, ಈ ಬಾರಿ ಗೆಲುವು ಸಾಧಿಸಿದ್ದಾರೆ. ಶಿಗ್ಗಾವಿ ಮತ ಎಣಿಕೆಯಲ್ಲಿ ಸತತ ಏಳನೇ ಸುತ್ತಿನಿಂದಲೇ ಯಾಸಿರ್ ಖಾನ್ ಪಠಾಣ್ ಮುನ್ನಡೆ ಸಾಧಿಸುತ್ತ ಬಂದರು. ಸದ್ಯದ ಟ್ರೆಂಡ್ ನಂತೆ ಕಾಂಗ್ರೆಸ್ ಅಭ್ಯರ್ಥಿ 75,780 ಮತ ಪಡೆದಿದ್ದರೆ, ಬಿಜೆಪಿಯ ಭರತ್ ಬೊಮ್ಮಾಯಿ ಅವರು 67,784 ಮತ ಪಡೆದು ಹಿಂದುಳಿದಿದ್ದಾರೆ. 9 ಸಾವಿರಕ್ಕೂ ಅಧಿಕ ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಬಾಕಿಯಿದೆ.