ಅಪ್ರಾಪ್ತ ಪತ್ನಿ ಜೊತೆಗಿನ ಒಪ್ಪಿತ ಲೈಂಗಿಕ ಕ್ರಿಯೆಯೂ ಅತ್ಯಾಚಾರ ಎಂದು ಪರಿಗಣಿಸಲಾಗುತ್ತದೆ. ಅಂತಹ ಕೃತ್ಯವನ್ನು ಕಾನೂನಿನಡಿಯಲ್ಲಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಈ ವಿಚಾರವಾಗಿ ವ್ಯಕ್ತಿಯೊಬ್ಬನಿಗೆ 10 ವರ್ಷಗಳ ಶಿಕ್ಷೆ ನೀಡಿದ್ದ ಹೈಕೋರ್ಟ್‌ನ ನಾಗ್ಪುರ ಪೀಠದ ಆದೇಶವನ್ನು ಎತ್ತಿ ಹಿಡಿದಿದೆ. ಲೈಂಗಿಕ ಸಂಬಂಧದ ಒಪ್ಪಿಗೆಯ ವಯಸ್ಸು 18 ವರ್ಷಕ್ಕಿಂತ ಹೆಚ್ಚಿದೆ. ಕಡಿಮೆ ವಯಸ್ಸಿನವರೊಂದಿಗೆ ದೈಹಿಕ ಸಂಬಂಧ ಹೊಂದುವುದು ಅತ್ಯಾಚಾರಕ್ಕೆ ಸಮ ಎಂದು ನ್ಯಾಯಮೂರ್ತಿ ಜಿ.ಎ. ಸನಪ್ ಅವರಿದ್ದ ಏಕಸದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ.
ಮಹಾರಾಷ್ಟ್ರದಲ್ಲಿ ವಾಸಿಸುತ್ತಿದ್ದ ಸಂತ್ರಸ್ತೆ ತಂದೆ, ಸಹೋದರಿಯರು ಮತ್ತು ಅಜ್ಜಿಯೊಂದಿಗೆ ವಾಸಿಸುತ್ತಿದ್ದರು. ಆರೋಪಿ ಹಾಗೂ ಸಂತ್ರಸ್ತೆ ಪ್ರೀತಿಸುತ್ತಿದ್ದರು. ಈ ಸಂದರ್ಭದಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದರೂ ಸಂತ್ರಸ್ತೆ ಒಪ್ಪಿರಲಿಲ್ಲ. ಸಂತ್ರಸ್ತೆಯ ಆರೋಪದಂತೆ, ಆರೋಪಿಯು ಮದುವೆಯಾಗುವುದಾಗಿ ಭರವಸೆ ನೀಡಿದ್ದಾನೆ. ನೆರೆಹೊರೆಯವರ ಸಮ್ಮುಖದಲ್ಲಿ ಬಾಡಿಗೆ ಕೋಣೆಯಲ್ಲಿ ‘ನಕಲಿ ಮದುವೆ’ ಕಾರ್ಯಕ್ರಮ ನಡೆಸಿದ್ದಾನೆ. ಮದುವೆಯಾದ ನಂತರ ದೌರ್ಜನ್ಯ ಎಸಗಿದ್ದೆ. ದೈಹಿಕ ಹಲ್ಲೆ ಮಾಡಿದ್ದಾನೆ. ಗರ್ಭಪಾತ ಕೂಡ ಮಾಡಿಸಿದ್ದಾನೆ. ಮಗುವಾದ ನಂತರ ತಂದೆ ನಾನಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದರು.
ಆರೋಪಿ ಮತ್ತು ಸಂತ್ರಸ್ತೆ ಸಂಬಂಧದಿಂದ ಜನಿಸಿದ ಮಗುವಿನ ಜೈವಿಕ ಪೋಷಕರು ಅವರೇ ಎಂಬುವುದನ್ನು ಡಿಎನ್‌ಎ ವರದಿ ದೃಢಪಡಿಸಿದೆ ಎಂದು ಕೂಡ ಪೀಠ ಹೇಳಿದೆ.