ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿರುವ ಸಂಗತಿ ಬೆಳಕಿಗೆ ಬಂದಿದೆ.
ಸಲ್ಮಾನ್ ಖಾನ್ ಮನೆ ಮುಂದೆ ಗುಂಡು ಹಾರಿಸಿದ್ದ ಪ್ರಕರಣ ಇತ್ತೀಚೆಗಷ್ಟೇ ನಡೆದಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಜನರನ್ನು ಬಂಧಿಸಿದ್ದಾರೆ. ಬಂಧಿತರನ್ನು ತೀವ್ರ ವಿಚಾರಣೆಗೂ ಒಳಪಡಿಸಿದ್ದಾರೆ. ಈ ವಿಚಾರಣೆಯಲ್ಲಿ ಭಯಬೀಳಿಸುವಂತ ಪಾತಕಿಯೊಬ್ಬನ ಹೆಸರು ಕೇಳಿ ಬಂದಿದೆ. ಸಲ್ಮಾನ್ ಹತ್ಯೆಗೆ ನಟೋರಿಸ್ ರೋಹಿತ್ ಗೊದಾರ (Rohit Godara) ಸಂಚು ಹಾಕಿದ್ದ ಅನ್ನುವ ವಿಷಯ ಬೆಳಕಿಗೆ ಬಂದಿದೆ.
ಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದರು. ಆತನನ್ನು ಹರ್ಪಾಲ್ ಎಂದು ಗುರುತಿಸಲಾಗಿದೆ. ಮೊನ್ನೆಯಷ್ಟೇ ಮೊಹಮ್ಮದ್ ರಫೀಕ್ ಚೌಧರಿ (Mohammed Rafique Chaudhary) ಹೆಸರಿನ 5ನೇ ಆರೋಪಿಯನ್ನು ರಾಜಸ್ಥಾನದ ನಾಗೌರ್ ನಲ್ಲಿ ಬಂಧಿಸಿದ್ದರು. ಈ ಇಬ್ಬರೂ ಕೂಡ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ತಂಡದ ಸದಸ್ಯನೆಂದು ಹೇಳಲಾಗುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತೀವ್ರ ತನಿಖೆ ನಡೆಸಿದ್ದಾರೆ.