ಬೆಂಗಳೂರು: ನಗರದಲ್ಲಿ ಹಾಡಹಗಲೇ ನಡೆದಿದ್ದ 7.11 ಕೋಟಿ ರೂ. ಹಣ ದರೋಡೆ ಪ್ರಕರಣವನ್ನುಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಪ್ರಕರಣದ ಮಾಸ್ಟರ್ ಮೈಂಡ್‌ಯಾದ ಗೋವಿಂದಪುರ ಠಾಣೆ ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ್ ಅನ್ನು ಅಮಾನತು ಮಾಡಿ ಪೂರ್ವ ವಿಭಾಗದ ಡಿಸಿಪಿ ಬಿ.ದೇವರಾಜ್ ಅವರು ಆದೇಶ ಹೊರಡಿಸಿದ್ದಾರೆ.
ಹಾಡಹಗಲೇ ಹಣ ಲೂಟಿ ಹೊಡೆಯಲು ಗೋವಿಂದಪುರ ಠಾಣೆ ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ಸಾಥ್ ನೀಡಿದ್ದ. ಇತನೇ ಹುಡುಗರನ್ನು ದರೋಡೆಗೆ ಸಿದ್ಧಪಡಿಸಿದ್ದ ಎಂಬ ವಿಚಾರವು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿತ್ತು.
ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಬೀಟ್ ಸಿಬ್ಬಂದಿಯಾಗಿ ಅಣ್ಣಪ್ಪ ನಾಯ್ಕ್ ಕೆಲಸ ಮಾಡುತ್ತಿದ್ದ. ಈ ಹಿಂದೆ ಕ್ರೈಂ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಣ್ಣಪ್ಪನನ್ನು ಅಲ್ಲಿಂದ ತೆಗೆದು ಬೀಟ್ ಡ್ಯೂಟಿಗೆ ಹಾಕಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತು ಮಾಡಲಾಗಿದೆ.
ಇನ್ನು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ಕಮಿನಷರ್ ಸೀಮಂತ್ ಕುಮಾರ್, ಆಯಾ ಠಾಣೆಗಳಲ್ಲಿ ಎಲ್ಲರನ್ನು ಖುದ್ದು ವಿಚಾರಣೆ ಮಾಡಿ ರಿಪೋರ್ಟ್ ನೀಡುವಂತೆ ಆಯಾ ವಿಭಾಗದ ಡಿಸಿಪಿ ಮತ್ತು ಎಸಿಪಿಗಳಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು.. !



















