ಹಾಸನ: ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾನ್ಸ್ ಟೇಬಲ್ (Police Constable) ಸಾವನ್ನಪ್ಪಿರುವ ಘಟನೆ ನಡೆದಿದೆ.
ಹಾಸನ (Hassan) ಹೊರವಲಯದ ಕೆಂಚನಹಳ್ಳಿ ಬಳಿ ಈ ಘಟನೆ ನಡೆದಿದೆ. ಪ್ರಕಾಶ್(38) ಸಾವನ್ನಪ್ಪಿರುವ ಪೊಲೀಸ್ ಕಾನ್ಸ್‌ಟೇಬಲ್. ಪ್ರಕಾಶ್ 11ನೇ ರಾಜ್ಯ ಮೀಸಲು ಪೊಲೀಸ್ ಪಡೆಯ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ನಗರದಿಂದ ಸರ್ಕಾರಿ ದ್ವಿಚಕ್ರ ವಾಹನದಲ್ಲಿ ಗಾಡೇನಹಳ್ಳಿಗೆ ಕರ್ತವ್ಯಕ್ಕೆ ತೆರಳುತ್ತಿದ್ದವೇಳೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



















