ಬೆಂಗಳೂರು : ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಶುಭ ಸಮಾಚಾರ ಲಭಿಸಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಕನ್ಸಲ್ಟಂಟ್ ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
“ಹುದ್ದೆಗಳ ವಿವರ”
ಹುದ್ದೆಯ ಹೆಸರು: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಒಟ್ಟು ಹುದ್ದೆ: 01
ಹುದ್ದೆಗಳ ಹೆಸರು: ಕನ್ಸಲ್ಟಂಟ್
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 17
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ ಕೋರ್ಸ್ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳನ್ನು ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಗರಿಷ್ಠ 63 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವವರು ಮೊದಲಿಗೆ mohfw.gov.in ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು, ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ ವೇತನ, ಪ್ರವಾಸ ಭತ್ಯೆ ಹಾಗೂ ಎಚ್ ಆರ್ ಎ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
“ಅರ್ಜಿ ಸಲ್ಲಿಸಬೇಕಾದ ವಿಳಾಸ”
Senior Accounts Officer (Admin), Pr. Accounts Office, M/o Health & Family Welfare Room No. 313-D Nirman Bhawan, New Delhi 110011. ಇಮೇಲ್ ಮೂಲಕ ಅರ್ಜಿ ಸಲ್ಲಿಸುವವರು ಅರ್ಜಿ ಹಾಗೂ ದಾಖಲೆಗಳ ಸಾಫ್ಟ್ ಕಾಪಿಗಳನ್ನು praoadmn-mohfw@gov.in ಗೆ ಮೇಲ್ ಮಾಡಬಹುದಾಗಿದೆ.