ಬೆಂಗಳೂರು : ಕೇಂದ್ರ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ಕನ್ಸಲ್ಟಂಟ್ ಹುದ್ದೆಯ ನೇಮಕಾತಿಗಾಗಿ ಅರ್ಜಿಗಳನ್ನು (Ministry of External Affairs Recruitment 2025) ಆಹ್ವಾನಿಸಲಾಗಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.
ಹುದ್ದೆಗಳ ವಿವರ ಇಂತಿದೆ :
ನೇಮಕಾತಿ ಸಂಸ್ಥೆ: ವಿದೇಶಾಂಗ ವ್ಯವಹಾರಗಳ ಸಚಿವಾಲಯ
ಹುದ್ದೆಗಳ ಹೆಸರು: ಕನ್ಸಲ್ಟಂಟ್
ಒಟ್ಟು ಹುದ್ದೆಗಳು: 01
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 22
ಉದ್ಯೋಗ ಸ್ಥಳ: ನವದೆಹಲಿ
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ವರ್ಷಕ್ಕೆ 12 ಲಕ್ಷ ರೂಪಾಯಿ ಪ್ಯಾಕೇಜ್ ಸಿಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು mea.gov.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. ಇಲ್ಲವೇ, ಅರ್ಜಿ ಹಾಗೂ ದಾಖಲೆಗಳ ಸಾಫ್ಟ್ ಕಾಪಿಯನ್ನು aopfsec@mea.gov.in ಗೆ ಮೇಲ್ ಮಾಡಿದರೂ ಸಾಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ : Secretary (PF&PG) Ministry of External Affairs, Room No. 4071, Jawaharlal Nehru Bhawan, 23-D, Janpath, New Delhi-110011.