ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಈ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ಈಗ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಪೊಲೀಸರು ಪ್ರಕರಣದ ಕುರಿತು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಇನ್ನೂ ಚಾರ್ಜ್ ಶೀಟ್ ಸಲ್ಲಿಕೆಯಾಗಿಲ್ಲ. ಇಂಚಿಂಚು ವಿಷಯವನ್ನೂ ಪೊಲೀಸರು ಕೆದಕುತ್ತಿದ್ದಾರೆ. ಹೀಗಾಗಿ ದರ್ಶನ್ ಆಂಡ್ ಗ್ಯಾಂಗ್ ಗೆ ಸಂಕಷ್ಟ ತಪ್ಪಿದ್ದಲ್ಲ ಎನ್ನಲಾಗುತ್ತಿದೆ. ಈ ಮಧ್ಯೆ ವಿಜಯಲಕ್ಷ್ಮೀ ದರ್ಶನ್ ಪತಿಗಾಗಿ ದೇವರ ಮೊರೆ ಹೋಗಿದ್ದಾರೆ.
ದರ್ಶನ್ ಅರೆಸ್ಟ್ ಆಗಿ ಎರಡು ತಿಂಗಳು ಕಳೆಯುತ್ತಾ ಬಂದಿದೆ. ಇನ್ನೂ ಕೆಲವು ದಿನ ಅವರಿಗೆ ಬೇಲ್ ಸಿಗುವುದು ತುಂಬಾ ಕಷ್ಟ. ಈ ಪ್ರಕರಣದಲ್ಲಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದಾದ ನಂತರವೇ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಹೀಗಾಗಿ ಪತಿ ಈ ಪ್ರಕರಣದಿಂದ ಮುಕ್ತರಾಗಲಿ ಎಂದು ಪತ್ನಿ ವಿಜಯಲಕ್ಷ್ಮೀ ದೇವರ ಮೊರೆ ಹೋಗಿದ್ದಾರೆ.
ಟೆಂಪಲ್ ರನ್ ನಡೆಸಿ ಪೂಜೆ ಸಲ್ಲಿಸುತ್ತಿದ್ದಾರೆ. ಆಗಸ್ಟ್ 4ರಂದು ಭೀಮನ ಅಮವಾಸ್ಯೆ ಇತ್ತು. ಹೀಗಾಗಿ, ವಿಜಯಲಕ್ಷ್ಮೀ ಅವರು ಬನಶಂಕರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಬನಶಂಕರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪತಿಯನ್ನು ಹೊರಕ್ಕೆ ತರಲು ಅವರು ಶಕ್ತಿ ದೇವತೆಗಳ ಮೋರೆ ಹೋಗಿದ್ದಾರೆ. ಇತ್ತೀಚೆಗೆ ವಿಜಯಲಕ್ಷ್ಮೀ ಕೊಲ್ಲೂರಿಗೆ ಭೇಟಿ ನೀಡಿ ನವಚಂಡಿಕಾ ಹೋಮ ಮಾಡಿಸಿದ್ದರು.