ಬೆಂಗಳೂರು: ಪಾಣಿಯಲ್ಲಿ ಹೆಸರು ನೋಂದಣಿ ಮಾಡುವುದಕ್ಕೆ 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮೂವರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಯಲಹಂಕದ ಸ್ಪೆಷಲ್ ತಹಸೀಲ್ದಾರ್ ಮುನಿಸ್ವಾಮಿ, ಯಲಹಂಕದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಗೆಸ್ಟ್ ಲೆಕ್ಚರರ್ ನಾಗರಾಜು, ಸಂದೀಪ್ ಸೇರಿದಂತೆ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮಹೇಶ್ ಎಂಬ ವಕೀಲರು ನೀಡಿದ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತರು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. 10 ಲಕ್ಷ ರೂ.ಗೆ ಬೇಡಿಕೆ ಇಟ್ಟು, ಇಂದು 2 ಲಕ್ಷ ರೂ. ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು, ರೆಡ್ ಹ್ಯಾಂಡ್ ಆಗಿ ಭ್ರಷ್ಟರ ಬೇಟೆಯಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು ಮೊದಲ ಆರೋಪಿ ಮುನಿಸ್ವಾಮಿ ರೆಡ್ಡಿಗಾಗಿ ಬಲೆ ಬೀಸಿದ್ದಾರೆ.