ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲಿಂದ ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿ ಬರುತ್ತಲೇ ಇದೆ. ಈಗ ಆ ಸಾಲಿಗೆ ಮತ್ತೊಂದು ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯಲ್ಲಿ ಬಹುಕೋಟಿ ಹಗರಣ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.
ಚಿತ್ರದುರ್ಗದಲ್ಲಿ ಕಟ್ಟಡ ಕಾರ್ಮಿಕ ಸಂಘಟನೆ ರಾಜ್ಯ ಕಾರ್ಯದರ್ಶಿ ಸುದ್ದಿಘೋಷ್ಠಿ ಮೂಲಕ ಕಾರ್ಮಿಕ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ಧಾರೆ. ಕಾರ್ಮಿಕ ಇಲಾಖೆಯ ಭ್ರಷ್ಟಾಚಾರ ಕುರಿತು ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾರ್ಯದರ್ಶಿ, ಕಾರ್ಮಿಕ ಇಲಾಖೆಯಲ್ಲಿ ಕೋಟ್ಯಾಂತರ ಹಣ ದುರ್ಬಳಕೆಯಾಗಿದೆ. ಕಾರ್ಮಿಕರಿಗೆ ಹೆಲ್ತ್ ಚೆಕಪ್, RPL ತರಬೇತಿ ಹೆಸರಲ್ಲಿ ಕೋಟಿ ಕೋಟಿ ಗೋಲ್ ಮಾಲ್ ಆಗಿದೆ ಎಂದು ಆರೋಪಿಸಲಾಗಿದೆ.
ಸಚಿವ ಸಂತೋಷ್ ಲಾಡ್ ಇಲಾಖೆಯಲ್ಲಿ ಕೋಟಿ ಕೋಟಿ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಕಾರ್ಮಿಕರ ಆರೋಗ್ಯ ತಪಾಸಣೆ ಮತ್ತು ತರಬೇತಿ ಹೆಸರಲ್ಲಿ 400 ಕೋಟಿ ಅವ್ಯವಹಾರದ ನಡೆದಿದೆ ಎನ್ನಲಾಗಿದೆ. ಖಾಸಗಿ ಆಸ್ಪತ್ರೆಗಳಿಗೆ ಟೆಂಡರ್ ನೀಡಿ ಹಣ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಈ ಸಂಬಂಧಿಸಿದಂತೆ ರಾಜ್ಯ ಕಾರ್ಯದರ್ಶಿ ವೈ.ಕುಮಾರ್ ಅವರಿಂದ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ ಮಾಡಲಾಗಿದೆ.
ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಡಿ.ಭಾರತಿ, ಜಂಟಿ ಕಾರ್ಯದರ್ಶಿ ಸಂಗಪ್ಪ ಉಪಾಸೆ, ಉಪ ಕಾರ್ಯದರ್ಶಿ ಕೆ.ಜಿ.ಜಾನ್ಸನ್, ಲೆಕ್ಕಾಧಿಕಾರಿ ಮಾಲಾಶ್ರೀ ವಿರುದ್ದ ಈಗಾಗಲೇ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. 400 ಕೋಟಿ ಹಣ ಅವ್ಯವಹಾರದ ಬಗ್ಗೆ ತನಿಖೆಗೆ ಆಗ್ರಹಿಸಿ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ ಮಾಡಲಾಗಿದೆ.
ಮೇ25 ರಂದು ಲೋಕಾಯುಕ್ತಕ್ಕೆ ಕಟ್ಟಡ ಕಾರ್ಮಿಕ ಸಂಘಟನೆ ರಾಜ್ಯ ಕಾರ್ಯದರ್ಶಿ ವೈ.ಕುಮಾರ್ ದೂರು ನೀಡಿದ್ದಾರೆ. ಪ್ರತಿ ಜಿಲ್ಲೆಗೆ 2024-25 ನೇ ಸಾಲಲ್ಲಿ 10 ಕೋಟಿಯಂತೆ 310 ಕೋಟಿಯನ್ನು ಇಲಾಖೆ ಬಿಡುಗಡೆ ಮಾಡಿದೆ. ಕಟ್ಟಡ ಕಾರ್ಮಿಕರಿಗೆ 20 ಮಾದರಿ ಹೆಲ್ತ್ ಚೆಕಪ್ ಹೆಸರಲ್ಲಿ ಹಣ ಭ್ರಷ್ಟಾಚಾರವಾಗಿದೆ. ಸೃಷ್ಠಿಸಿ ಹೆಲ್ತ್ ಚೆಕಪ್ ಹೆಸರಲ್ಲಿ ಬೋಗಸ್ ದಾಖಲೆ ಸೃಷ್ಠಿಸಿ 310 ಕೋಟಿ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎನ್ನಲಾಗಿದೆ. ತನಿಖೆ ನಡೆಸುವಂತೆ ಕಾರ್ಮಿಕ ಇಲಾಖೆ ಸರ್ಕಾರದ ಕಾರ್ಯದರ್ಶಿ ರೋಹಿಣಿ ಸಿಂಧೂರಿಗೂ ಪತ್ರದ ಮೂಲಕ ಒತ್ತಾಯಿಸಿದ್ದಾರೆ.



















