ಬೆಂಗಳೂರು : ಕಳೆದ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟ್ರೋಫಿ ಗೆದ್ದ ಬಳಿಕ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಂಭ್ರಮಾಚರಣೆ ವೇಳೆ ದುರಂತ ನಡೆದು 11 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಆ ಬಳಿಕ ಬೆಂಗಳೂರಿನಲ್ಲಿ ನಡೆದ ಪ್ರತಿಯೊಂದು ಐಪಿಎಲ್ ಪಂದ್ಯಕ್ಕೂ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರು.
ಈ ವರ್ಷವು ಕೂಡ RCB ಐಪಿಎಲ್ ಫೈನಲ್‌ಗೇರಿದ್ದು, ಇಂದು (ಮೇ 31) ಬೆಂಗಳೂರು ಮತ್ತು ಗುಜರಾತ್ ತಂಡಗಳ ನಡುವೆ ರೋಚಕ ಫೈನಲ್ ಕದನ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಹೀಗಾಗಿ ಪಂದ್ಯದ ಫಲಿತಾಂಶದ ಬಳಿಕ ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಅಲರ್ಟ್ ಆಗಿದ್ದು, ಅಭಿಮಾನಿಗಳಿಗೆ ಖಡಕ್ ಎಚ್ಚರಿಕೆ ನೀಡಿ ಮಾರ್ಗಸೂಚಿ ರಿಲೀಸ್ ಮಾಡಿದ್ದಾರೆ.
- ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಸಂಭ್ರಮಾಚರಣೆ ಮಾಡುವಂತಿಲ್ಲ
- ಅನುಮತಿ ಇಲ್ಲದೆ ರಸ್ತೆಗಳಲ್ಲಿ ಎಲ್ಇಡಿ ಸ್ಕ್ರೀನ್ ಅಳವಡಿಸುವಂತಿಲ್ಲ
- ಪಟಾಕಿ ಸಿಡಿಸಬಾರದು, ಅಪಾಯಕಾರಿ ವಸ್ತುಗಳನ್ನು ಬಳಸಬಾರದು
- ಜನಸಂದಣಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ಶಾಂತಿ, ಶಿಸ್ತು ಪಾಲಿಸಬೇಕು
- ಸಂಚಾರ ವಿಭಾಗದ ಪೊಲೀಸರು ನೀಡುವ ಸಲಹೆ ಸೂಚನೆ ಪಾಲಿಸಬೇಕು
- ಬೈಕ್ ರ್ಯಾಲಿ, ಅತಿವೇಗದ ಚಾಲನೆ, ಸ್ಟಂಟ್, ಹಾರ್ನ್ ಮಾಡುವಂತಿಲ್ಲ
- ರಸ್ತೆ ತಡೆದು ಸಂಭ್ರಮಾಚರಣೆ ಮಾಡುವಂತಿಲ್ಲವೆಂದು ಪೊಲೀಸರ ಸೂಚನೆ
- ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡಿ ಅಸಭ್ಯವಾಗಿ ವರ್ತಿಸಬಾರದು
- ಸಾಮಾಜಿಕ ಜಾಲತಾಣದಲ್ಲಿ ಅಶಾಂತಿ ಸೃಷ್ಟಿಸುವ ಪೋಸ್ಟ್ ಹಾಕುವಂತಿಲ್ಲ
- ಸಾಮಾಜಿಕ ಜಾಲತಾಣದಲ್ಲಿ ದ್ವೇಷಪೂರಿತ ಪೋಸ್ಟ್ ಹಂಚಿಕೊಳ್ಳಬಾರದು
- ಫಲಿತಾಂಶದ ಹೆಸರಿನಲ್ಲಿ ಬೇರೆ ತಂಡದ ಅಭಿಮಾನಿಗಳನ್ನು ನಿಂದಿಸಬಾರದು
IPL ಫೈನಲ್ ಹಿನ್ನೆಲೆ ನಗರದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಬೆಂಗಳೂರು ಪೊಲೀಸರು ಈ ಸೂಚನೆಗಳನ್ನು ಪಾಲಿಸುವಂತೆ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕ್ರೀಡೆಯನ್ನ ಕ್ರೀಡೆಯಾಗಿ ಸ್ವೀಕರಿಸಿ ಜವಾಬ್ದಾರಿಯುತವಾಗಿ ವರ್ತಿಸುವಂತೆ ಸೂಚಿಸಲಾಗಿದ್ದು, ಇದನ್ನು ಮೀರಿ ಹುಚ್ಚಾಟ ನಡೆಸಿದರೆ ಕಾನೂನು ಕ್ರಮ ಫಿಕ್ಸ್ ಎಂಬ ಎಚ್ಚರಿಕೆಯನ್ನೂ ನಗರ ಪೊಲೀಸ್ ಆಯುಕ್ತ ಸೀಂಮತ್ ಕುಮಾರ್ ಸಿಂಗ್ ನೀಡಿದ್ದಾರೆ.
ಇದನ್ನೂ ಓದಿ : RCB ವಿರುದ್ಧ ತವರಿನ ಲಾಭದ ನಿರೀಕ್ಷೆಯಲ್ಲಿ ಗುಜರಾತ್ ಟೈಟಾನ್ಸ್ ನಾಯಕ ಶುಭಮನ್ ಗಿಲ್!



















