ಮಾಕ್ ಡ್ರಿಲ್ ಗೆ ಕ್ಷಣಗಣನೆ ಶುರುವಾದ ಬೆನ್ನಲ್ಲೇ ದೆಹಲಿಯಲ್ಲೂ ಚಟುವಟಿಕೆಗಳು ಗರಿಗೆದರಿವೆ.
ಪ್ರಧಾನಿ ನರೇಂದ್ರ ಮೋದಿ ಕಚೇರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ದೌಡಾಯಿಸಿದ್ದಾರೆ. ಮೋದಿ ಜೊತೆ ಅಜಿತ್ ದೋವಾಲ್ ಸಮಾಲೋಚನೆಯಲ್ಲಿ ತೊಡಗಿದ್ದಾರೆ.
ನಾಳಿನ ಅಣಕು ಯುದ್ಧ ತರಬೇತಿ ಸೇರಿದಂತೆ ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಛೀಮಾರಿ ವಿಚಾರಗಳನ್ನು ಉಭರು ಚರ್ಚಿಸಿದ್ದಾರೆ ಎನ್ನಲಾಗುತ್ತಿದೆ. ಇದೇ ವೇಳೆ, 12ನೇ ದಿನವೂ ಗಡಿಯಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ಫೈರಿಂಗ್ ಮುಂದುವರಿಸಿದೆ. ಹೀಗಾಗಿ ಇಂದಿನ ಸಭೆಯಲ್ಲಿ ಈ ಎಲ್ಲ ವಿಚಾರಗಳ ಚರ್ಚೆ ನಡೆಯುತ್ತಿದೆ. ಇದರ ನಡುವೆ, ಪಾಕ್ ವಿರುದ್ಧದ ಮುಂದಿನ ರಣತಂತ್ರದ ಬಗ್ಗೆ ವಿಸ್ತೃತ ಸಮಾಲೋಚನೆ ಕೂಡ ನಡೆದಿದೆ.