ಬೆಂಗಳೂರು : ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ.
ಸುಮಾರು 19.15 ಕಿ.ಮೀ. ಉದ್ದದ ಹಳದಿ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಆ.10ಕ್ಕೆ ಉದ್ಘಾಟಿಸಲಿದ್ದಾರೆ.
ಆರ್ ವಿ ರಸ್ತೆಯಿಂದ ಬೊಮ್ಮಸಂದ್ರದ ವರೆಗಿನ ಹಳದಿ ಮಾರ್ಗವನ್ನು ಸುಮಾರು 5,056.99 ಕೋಟಿ ವೆಚ್ಚದಲ್ಲಿ ನಿರ್ಮಾಣಮಾಡಲಾಗಿದೆ.

ಹಳದಿ ಮಾರ್ಗದಲ್ಲಿ 16 ನಿಲ್ದಾಣಗಳು ಬರಲಿವೆ. ನರೇಂದ್ರ ಮೋದಿ ಮೆಟ್ರೋ ಫೇಸ್ 3ಗೂ ಶಂಕು ಸ್ಥಾಪನೆ ಮಾಡಲಿದ್ದಾರೆ
44.65 ಕಿ.ಮೀಮ ಉದ್ದದ ಮೆಟ್ರೋ ಫೇಸ್ 3 ಮಾರ್ಗ ಇರಲಿದೆ. 15,611 ಕೋಟಿ ವೆಚ್ಚದಲ್ಲಿ ಮೆಟ್ರೋ ಫೇಸ್ 3 ಮಾರ್ಗವನ್ನು ನಿರ್ಮಾಣ ಮಾಡಲಾಗುತ್ತಿದೆ.



















