ಬೆಂಗಳೂರು : ಲಂಚ ಪಡೆದು ಜೈಲು ಸೇರಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಗ್ ರಿಲೀಫ್ ನೀಡಿದೆ.
ಹೌದು.. 5 ಲಕ್ಷ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಷರತ್ತುಬದ್ಧ ಜಾಮೀನು ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಶಾಸಕ ಚಂದ್ರು ಲಮಾಣಿ ಕಳೆದ 15 ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಈ ಮಧ್ಯೆ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಚಂದ್ರು ಲಮಾಣಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಎರಡು ಲಕ್ಷ ರೂ. ವೈಯಕ್ತಿಕ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿ ಒದಗಿಸುವ ಷರತ್ತಿನೊಂದಿಗೆ ನ್ಯಾಯಾಲಯ ಜಾಮೀನು ನೀಡಿ ಆದೇಶಿಸಿದೆ.
ರಸ್ತೆ ಬದಿ ತಡೆಗೋಡೆ ನಿರ್ಮಾಣ ಸಂಬಂಧ 1 ಕೋಟಿ ಮೊತ್ತದ ಕಾಮಗಾರಿಗೆ ಶಾಸಕ ಚಂದ್ರು ಲಮಾಣಿ ಕ್ಲಾಸ್-1 ಗುತ್ತಿಗೆದಾರ ವಿಜಯ ಪೂಜಾರ ಎನ್ನುವವರ ಬಳಿ 11 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದರು. ಇದರ ಮೊದಲ ಹಂತದ ಹಣವಾಗಿ 5 ಲಕ್ಷ ರೂ. ಪಡೆಯುವಾಗಲೇ ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದ ತಂಡ ದಾಳಿ ನಡೆಸಿದೆ. ಈ ವೇಳೆ ಶಾಸಕರು ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿದ್ದರು.
ಇದನ್ನೂ ಓದಿ : ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯಗೊಳಿಸಿದ ‘ಬಿಂದಾಸ್’ ನಟಿ ಹನ್ಸಿಕಾ.. ಜೀವನಾಂಶ ಬೇಡ ಎಂದಿದ್ಯಾಕೆ?



















