ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಮೇ 24 ರಂದು ಬಿಜೆಪಿ ವತಿಯಿಂದ ನಡೆದಿದ್ದ ʻಕಲಬುರಗಿ ಚಲೋʼ ಪ್ರತಿಭಟನಾ ರ್ಯಾಲಿ ಸಂದರ್ಭದಲ್ಲಿ ಮಾತನಾಡಿದ್ದ ವಿಪ ಸದಸ್ಯ ಎನ್.ರವಿಕುಮಾರ್, ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ರವಿಕುಮಾರ್ ವಿರುದ್ಧ ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ಅಟ್ರಾಸಿಟಿ ಕಾಯ್ದೆಯಡಿ ಎಫ್ಐಆರ್ ದಾಖಲಿಸಲಾಗಿತ್ತು. ಹೀಗಾಗಿ ದೂರು ದಾಖಲಿಸಿದ್ದ ಪೊಲೀಸರು ರವಿಕುಮಾರ್ ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ನೋಟಿಸ್ ನಂತೆ ರವಿಕುಮಾರ್ ಇಂದು ಕಲಬುರಗಿ ಎ ವಿಭಾಗದ ಎಸಿಪಿ ಮುಂದೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ, ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಕೋರ್ಟ್ ವಿಚಾರಣೆಗೆ ಸಹಕರಿಸುವಂತೆ ಖಡಕ್ ಸೂಚನೆ ನೀಡಿದೆ.