ಒಂದು ಕಡೆ RCB 18 ವರ್ಷಗಳ ನಂತರ ಕಪ್ ಗೆದ್ದಿರುವುದು ಖುಷಿಯ ಸಂಭ್ರಮ. ಮತ್ತೊಂದು ಕಡೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವಿಗಿಡಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಸಾಕಷ್ಟು ನಾಯಕರು, ಮೃತರು ಪೋಷಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇದೇ ವಿಚಾರವಾಗಿ ಹೈಕೋರ್ಟ್ ಸಾರ್ವಜನಿಕ ಹಿತಾಸಕ್ತಿಯಿಂದ ಸ್ವಯಂಪ್ರೇರಿತ ಕೇಸ್ ದಾಖಲಿಸಿ ಇವತ್ತು ವಿಚಾರಣೆಯನ್ನು ನಡೆಸಿದೆ. ವಿಚಾರಣೆ ಸಂದರ್ಭದಲ್ಲಿ ರಾಜ್ಯ ಸರ್ಕಾರಕ್ಕೆ ಕೆಲವು ಪ್ರಶ್ನೆಗಳನ್ನು ಕೇಳಲಾಗಿದೆ.
ಸರ್ಕಾರಕ್ಕೆ ಕೋರ್ಟ್ ಪ್ರಶ್ನೆ ಏನೆಂದರೆ
- ಯಾಕೆ ಎರಡು ಕಡೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು?
- ಸರ್ಕಾರದಿಂದ ಸ್ಟೇಡಿಯಂ ಬಳಿ ಏನು ಕ್ರಮ ಕೈಗೊಳ್ಳಲಾಗಿತ್ತು?
- ಜನರ ನಿಯಂತ್ರಣಕ್ಕೆ ಏನೆಲ್ಲಾ ಕ್ರಮವಹಿಸಲಾಗಿತ್ತು?
- ಆಟಗಾರರು ಯಾವ ದೇಶಕ್ಕಾಗಿ ಆಡಿದ್ದರು ಅಂತಾ ಸನ್ಮಾನ? ಎಂದು ಪ್ರಶ್ನೆ ಮಾಡಿ ವಾದ ಪ್ರತಿವಾದ ಆಲಿಸಿದ ಕೋರ್ಟ್, ವಿಚಾರಣೆಯನ್ನು ಜೂನ್ 10ಕ್ಕೆ ಮೂಂದೂಡಿ ಆದೇಶ ಹೊರಡಿಸಿದೆ. ಸರ್ಕಾರದ ಪರ AG ಶಶಿಕಿರಣ್ ಶೆಟ್ಟಿ ವಾದ ಮಾಡಿದ್ದಾರೆ.