ಚಿತ್ರದುರ್ಗದ ರೇಣುಕಾಸ್ವಾಮಿ (Renuka Swamy) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಈ ಮಧ್ಯೆ ಆರೋಪಿಗಳ ಜಾಮೀನು ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗಿದ್ದು, ಕೋರ್ಟ್ ಕೂಡ ವಿಚಾರಣೆಗೆ ಒಪ್ಪಿದೆ ಎನ್ನಲಾಗಿದೆ.
ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಕೆಲವರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ಅದರ ಬೆನ್ನಲ್ಲೆ ಪೊಲೀಸ್ ಇಲಾಖೆಯು ಗೃಹ ಇಲಾಖೆಯ ಅನುಮತಿ ಪಡೆದು ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣಎ ಇಲ್ಲಿಯವರೆಗೆ ನಡೆದಿರಲಿಲ್ಲ. ಈಗ ಜಾಮೀನು ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸುವಂತೆ ವಕೀಲ ವಕೀಲ ಅನಿಲ್ ಕುಮಾರ್ ನಿಶಾನಿ ಮನವಿ ಮಾಡಿದ್ದಾರೆ. ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಮಂದಿ ಆರೋಪಿಗಳ ಜಾಮೀನು ರದ್ದು ಮಾಡುವಂತೆ ಮನವಿ ಸಲ್ಲಿಸಲಾಗಿದೆ.
ಸುಪ್ರೀಂಕೋರ್ಟ್ ಏಪ್ರಿಲ್ 2 ರಂದು ಅರ್ಜಿಯ ವಿಚಾರಣೆ ನಡೆಸುವುದಾಗಿ ಹೇಳಿದೆ. ವಿಚಾರಣೆಯ ತೀರ್ಪು ಪೊಲೀಸ್ ಪರವಾದರೆ, ದರ್ಶನ್, ಪವಿತ್ರಾ ಸೇರಿ ಇನ್ನೂ ಕೆಲ ಆರೋಪಿಗಳು ಮತ್ತೆ ಜೈಲು ಪಾಲಾಗಲಿದ್ದಾರೆ.