ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆಯಲ್ಲಿ (CPCRI Recruitment 2026) ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ಯಂಗ್ ಪ್ರೊಫೇಷನಲ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ನೇಮಕಾತಿ ಸಂಸ್ಥೆ: ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ
ಹುದ್ದೆಗಳ ಹೆಸರು: ಯಂಗ್ ಪ್ರೊಫೇಷನಲ್
ಒಟ್ಟು ಹುದ್ದೆಗಳು: 01
ಉದ್ಯೋಗ ಸ್ಥಳ: ವಿಟ್ಲ, ದಕ್ಷಿಣ ಕನ್ನಡ
ನೇಮಕಾತಿ ವಿಧಾನ: ಸಂದರ್ಶನ
ಸಂದರ್ಶನದ ದಿನಾಂಕ: ಏಪ್ರಿಲ್ 13
ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಕೃ ಷಿ ಅಥವಾ ತೋಟಗಾರಿಕೆ ಅಥವಾ ವಿಜ್ಞಾನ ವಿಭಾಗದಲ್ಲಿ ಎಂಎಸ್ಸಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 21 ವರ್ಷದಿಂದ 35 ವರ್ಷಗಳವರೆಗೆ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 42 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ cpcri.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಹುದ್ದೆಗೆ ಸಂಬಂಧಿಸಿದ ಅಧಿಸೂಚನೆಯನ್ನು ಓದಿಕೊಳ್ಳಬೇಕು. ಅಧಿಸೂಚನೆಯಲ್ಲಿ ತಿಳಿಸಿದ ದಾಖಲೆಗಳೊಂದಿಗೆ ನಿಗದಿತ ದಿನಾಂಕದಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯವರಿಗೆ ತಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಲು ಇದು ಒಳ್ಳೆಯ ಅವಕಾಶವಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
ICAR-CPCRI, Regional Station, Vittal, Bantwal Tk., Dakshina Kannada Dist., Karnataka.
ಇದನ್ನೂ ಓದಿ : ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ!



















