ಮುಂಬೈ: ಮಾಜಿ ಕ್ರಿಕೆಟಿಗ ಕೇದಾರ್ ಜಾಧವ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಮುಂಬೈನ ಬಿಜೆಪಿ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ಚಂದ್ರಶೇಖರ್ ಬವಾಂಕುಲೆ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗಿದ್ದಾರೆ. ಮೋದಿಯವರ ಅಭಿವೃದ್ಧಿ ಯೋಜನೆಗಳಿಂದ ಪ್ರೇರಿತರಾಗಿ ತಾವು ರಾಜಕೀಯ ರಂಗ ಪ್ರವೇಶಿಸುತ್ತಿರುವುದಾಗಿ ಹೇಳಿದ್ದಾರೆ.
ಪುಣೆಯ ಮಧ್ಯಮ ವರ್ಗದ ಕುಟುಂಬದಿಂದ ಬಂದ ಜಾಧವ್, ಟೀಂ ಇಂಡಿಯಾ ಪರ 73 ಏಕದಿನ ಪಂದ್ಯಗಳನ್ನಾಡಿದ್ದಾರೆ. 2014ರಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಪಂದ್ಯದಲ್ಲಿ ಜಾಧವ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು. 2016-17ರಲ್ಲಿ ಜಾಧವ್ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡವನ್ನು ಪ್ರತಿನಿಧಿಸಿದ್ದರು.