ಹಾಸನ: ಕುಂಭಮೇಳಕ್ಕೆ(Maha Kumbh Mela) ಹೋಗುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಹಾಸನ(Hassan) ಮೂಲದ ಯುವಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ವಾರಣಾಸಿ(Varanasi) ಹತ್ತಿರ ನಡೆದಿದೆ.
ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ನಿತಿನ್(30) ಸಾವನ್ನಪ್ಪಿರುವ ವ್ಯಕ್ತಿ. ಸಾವನ್ನಪ್ಪಿರುವ ವ್ಯಕ್ತಿ ತಮ್ಮ ಕುಟುಂಬ ಸದಸ್ಯರೊಂದಿಗೆ ಕುಂಭಮೇಳಕ್ಕೆ ತೆರಳುತ್ತಿದದ. ಈ ವೇಳೆ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ನಿತಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಲ್ಲದೇ, ನಿತಿನ್ ತಾಯಿಯ ಸ್ಥಿತಿ ಕೂಡ ಗಂಭೀರವಾಗಿದೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.