ಬೆಂಗಳೂರು: ಗ್ಯಾರಂಟಿ ಹಾಗೂ ಅಭಿವೃದ್ಧಿಗೆ ಜನ ಮತ ನೀಡಿದ್ದಾರೆ. ಇದು ಅಭಿವೃದ್ಧಿಯ ಕೈಗನ್ನಡಿ. ಇಲ್ಲಿ ಟೀಕೆ ಸತ್ತು, ಕೆಲಸ ಮಾತ್ರ ಉಳಿಯಿತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜನರು ಮತ ನೀಡಿದ್ದಾರೆ. ನಾನು ಚುನಾವಣೆ ಮುಗಿಯುತ್ತಿದ್ದಂತೆ ಸಮೀಕ್ಷೆಗಳು ಸುಳ್ಳಾಗುತ್ತವೆ ಎದು ಹೇಳಿದ್ದೆ. ನಾವು ಮಾಡುವ ಸಮೀಕ್ಷೆಯೇ ಬೇರೆ ಎಂದಿದ್ದೆ. ಈಗ ನಮ್ಮ ಸಮೀಕ್ಷೆಯೇ ಗೆದ್ದಿದೆ ಎಂದು ಹೇಳಿದ್ದಾರೆ.
ಕುಮಾರಸ್ವಾಮಿ ಮಂಡ್ಯ ಕ್ಷೇತ್ರದ ಸಂಸದರಾಗಿದ್ದಾರೆ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು. ಆ ಕ್ಷೇತ್ರದಲ್ಲಿ ಬಿಟ್ಟು ಹೋದ ಕುರುಹುಗಳಿಗೆ ಜನ ಈಗ ಚನ್ನಪಟ್ಟಣದಲ್ಲಿ ಉತ್ತರ ನೀಡಿದ್ದಾರೆ. ಇದು ನಿಖಿಲ್ ಸೋಲಲ್ಲ, ಕುಮಾರಸ್ವಾಮಿಯ ಸೋಲು. ಶಿಗ್ಗಾಂವಿಯಲ್ಲಿ ಭರತ್ ಸೋಲನ್ನು ಆತನ ಸೋಲು ಎನ್ನುವುದಿಲ್ಲ. ಅದು ಬಸವರಾಜ ಬೊಮ್ಮಾಯಿಯ ಸೋಲು ಎಂದಿದ್ದಾರೆ.
ಟೀಕೆ ಸಾಯುತ್ತವೆ, ಕೆಲಸ ಉಳಿಯಿತ್ತವೆ ಅಂತ. ಈಗ ಜನರ ಮನ್ನಣೆ ಕೊಟ್ಟಿದ್ದಾರೆ. ಜನರು ಭಾವನೆ ಮೇಲೆ ರಾಜಕಾರಣ ಮಾಡಲ್ಲ. ಬದುಕಿನ ಮೇಲೆ ರಾಜಕಾರಣ ಮಾಡಬೇಕು. ಅದಕ್ಕೆ ಜನರು ನಮಗೆ ಆಶೀರ್ವಾದ ಮಾಡಿದ್ದಾರೆ ಎಂದಿದ್ದಾರೆ.