ಉಡುಪಿ : ಕೇಸರಿ ಧ್ವಜ ತೋರಿಸಿ ಪರ್ಯಾಯ ಮೆರವಣಿಗೆಗೆ ಚಾಲನೆ ನೀಡಿದ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಗಳು ಕೇಳಿ ಬಂದ ಹಿನ್ನೆಲೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸ್ಪಷ್ಟನೆ ನೀಡಿದ್ದಾರೆ.

ಶಿರೂರು ಶ್ರೀವೇದ ವರ್ಧನ ತೀರ್ಥರ ಪರ್ಯಾಯ ಮೆರವಣಿಗೆ ಸಂಧರ್ಭದಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಅವರು ಡಿಸಿಗೆ ಕೇಸರಿ ಧ್ವಜ ಹಸ್ತಾಂತರಿಸಿದ್ದರು. ಶಾಸಕರಿಂದ ಕೇಸರಿ ಧ್ವಜ ಪಡೆದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮೆರವಣಿಗೆಗೆ ಚಾಲನೆ ನೀಡಿದ್ದರು.
ಈ ಕುರಿತು ಆಕ್ಷೇಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿದ್ದಾರೆ. ಪರ್ಯಾಯ ಮಹೋತ್ಸವದ ವೇಳೆ ನಗರಸಭೆಯ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಆಡಳಿಧಿಕಾರಿಯಾಗಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇನೆ. ಅದನ್ನು ಹೊರತುಪಡಿಸಿ ಯಾವುದೇ ರಾಜಕೀಯ ಪ್ರೇರಿತ ಭಾಗವಹಿಸುವಿಕೆ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಅದೇ ರೀತಿ ಪುರಪ್ರವೇಶಕ್ಕೂ ನಗರಸಭೆಯ ಆಡಳಿತಾಧಿಕಾರಿಯಾಗಿ ಭಾಗವಹಿಸಿದ್ದೇನೆ. ಯತಿಗಳ ಪೌರ ಸಮ್ಮಾನ ಹಾಗೂ ಸರ್ವಜ್ಞ ಪೀಠ ಏರಿದ ನಂತರ ದರ್ಬಾರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ಈ ವಿಚಾರವನ್ನು ಸಾರ್ವಜನಿಕರು ಗಮನಿಸಬೇಕು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ADGP ರಾಮಚಂದ್ರರಾವ್ ರಾಸಲೀಲೆ ವಿಡಿಯೋ ಪ್ರಕರಣ | ಅಧಿಕಾರಿ ವಿರುದ್ದ ಕೂಡಲೇ ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!



















