ಬೀದರ್ : ಪಶು ವಿಶ್ವ ವಿದ್ಯಾಲಯ ಸಾಮಾಗ್ರಿಗಳ ಖರೀದಿಯಲ್ಲಿ ನಕಲಿ ಬಿಲ್ ಗಳನ್ನು ಸೃಷ್ಟಿ ಮಾಡಿ ಕೋಟ್ಯಂತರ ರೂ. ಅವ್ಯವಹಾರವಾಗಿದೆ ಎಂಬ ದೂರು ಹಿನ್ನೆಲೆಯಲ್ಲಿ ಇಂದು(ಬುಧವಾರ) ಬೆಳಗ್ಗೆ ಗಡಿ ಜಿಲ್ಲೆ ಬೀದರ್ ನಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಬಿಸಿ ಮುಟ್ಟಿಸಿದ್ದಾರೆ.
ಏಕಕಾಲಕ್ಕೆ 25 ಕಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಭ್ರಷ್ಟರಿಗೆ ಬಿಸಿ ಮುಟ್ಟಿಸಿದ್ದು, ಬೀದರ್ ಜಿಲ್ಲೆಯ ಪಶು ವಿಶ್ವ ವಿದ್ಯಾಲಯದ ಸಿಬ್ಬಂದಿಗಳು ಹಾಗೂ ಖಾಸಗಿ ಎಂಟರ್ ಪ್ರೈಸಸ್ ಉದ್ಯಮಿಗಳ ನಿವಾಸಗಳು, ಶಾಪ್ ಗಳ ಮೇಲೆ ಲೋಕಾ ಪೊಲೀಸರು ದಾಳಿ ನಡೆಸಿದ್ದಾರೆ.
ಬೀದರ್ ನಗರ ಒಳಗೊಂಡಂತೆ ಜಿಲ್ಲೆಯಾದ್ಯಂತ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಕಾಮಗಾರಿ, ಸಾಮಗ್ರಿಗಳ ಖರೀದಿಯಲ್ಲಿ ಭಾರೀ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ.
ಲೋಕಾಯುಕ್ತ ಪೊಲೀಸರು ಪಶು ವಿಶ್ವ ವಿದ್ಯಾಲಯ ಸಿಬ್ಬಂದಿಗಳು ಹಾಗೂ ಖಾಸಗಿ ಎಂಟರ್ ಪ್ರೈಸಸ್ ಸಿಬ್ಬಂದಿಗಳು ನಿವಾಸಗಳು ಹಾಗೂ ಶಾಪ್ ಗಳಲ್ಲಿ ದಾಖಲೆಗಳ ತೀವ್ರ ಪರಿಶೀಲನೆ ಮಾಡುತ್ತಿದ್ದಾರೆ. ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಸಿದ್ದರಾಜು ಮಾರ್ಗದರ್ಶನದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಹನುಮಂತ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.