ಮೈಸೂರಿನ ಜಗತ್ಪ್ರಸಿದ್ಧ ಚಾಮುಂಡಿ ಬೆಟ್ಟದಲ್ಲಿ ಅವ್ಯವಸ್ಥೆ ಕುರಿತು ಸುದ್ದಿ ಬಿತ್ತರವಾಗುತ್ತಿದ್ದಂತೆ ಬೆಟ್ಟಕ್ಕೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ವರದಿಗಾರರಿಗೆ ಸ್ಪಂದಿಸಿದ ಅವರು, ನಾನು ಪೋಲಿಸ್ ಕಮಿಷನರ್ ಜೊತೆ ಸ್ಥಳ ಪರಿಶೀಲನೆ ನಡೆಸಿದ್ದೇನೆ. ಈ ಶುಕ್ತವಾರ ಮಧ್ಯಾಹ್ನದವರೆಗೆ ಸುಮಾರು ಎರಡು ಲಕ್ಷದಷ್ಟು ಜನ ಬಂದಿದ್ದಾರೆ. ಆಷಾಢ ಶುಕ್ರವಾರವಾಗಿರುವುದರಿಂದ ಕ್ಷೇತ್ರದಲ್ಲಿ ಜನದಟ್ಟನೆ ಹೆಚ್ಚಾಗಿತ್ತು. ಆ ಹಿನ್ನೆಲೆಯಲ್ಲಿ ಒಂದಿಷ್ಟು ವ್ಯತ್ಯಾಸಗಳಾಗಿವೆ ಎಂದು ಹೇಳಿದ್ದಾರೆ.
ಸರದಿ ಸಾಲಿನಲ್ಲಿ ಬರುವ ಜನರಿಗೆ ಸ್ವಲ್ಪ ಸಮಸ್ಯೆ ಆಗಿರುವುದು ನಿಜ. ಸದ್ಯ ಎಲ್ಲವನ್ನೂ ಸಹಜ ಸ್ಥಿತಿಗೆ ತಂದಿದ್ದೇವೆ ಎಂದು ಪ್ರತಿಕ್ರಿಯಿಸಿದ್ದಾರೆ.



















