ಹುಬ್ಬಳ್ಳಿ: ಉತ್ತರ ಕರ್ನಾಟಕದ ಪ್ರಸಿದ್ಧ ಸಿದ್ಧಾರೂಢರ ಮಹಾರಥೋತ್ಸವದ ಹಿನ್ನೆಲೆಯಲ್ಲಿ ಆಗಮಿಸುತ್ತಿರುವ ಭಕ್ತರಿಗೆ ಉಚಿತ ಸೇವೆ ಒದಗಿಸಲಾಗಿದೆ.
ಪ್ರತಿ ವರ್ಷದಂತೆ ಈ ವರ್ಷವೂ ಶಿವರಾತ್ರಿ ಅಂಗವಾಗಿ ಮಹಾರಥೋತ್ಸವ ನಡೆಯುತ್ತಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಹೀಗಾಗಿ ಮಠಕ್ಕೆ ಆಗಮಿಸುವ ಭಕ್ತರಿಗೆ ಉಚಿತ ಸೇವೆಯನ್ನು ಒದಗಿಸಲಾಗಿದೆ. ಸ್ಥಳೀಯ ಭಕ್ತರು ಈ ರೀತಿಯ ಸೇವೆಗಳನ್ನು ಒದಗಿಸಿದ್ದಾರೆ.
ಪಾದಯಾತ್ರೆ ಮೂಲಕ ಆಗಮಿಸುವ ಭಕ್ತರಿಗೆ ಉಚಿತ ಆಟೋ ಸೇವೆ ಹಾಗೂ ಅನ್ನ ಸಂತರ್ಪಣೆ ಕೈಗೊಳ್ಳಲಾಗುತ್ತಿದೆ. ಸ್ವಯಂ ಪ್ರೇರಿತವಾಗಿ ಅನ್ನಸಂತರ್ಪಣೆ ಹಾಗೂ ಉಚಿತ ಆಟೋ ಸೇವೆ ಒದಗಿಸಲಾಗಿದೆ. ಹೀಗಾಗಿ ದೇವಸ್ಥಾನವಿರುವ ಕಾರವಾರ ರಸ್ತೆಯುದ್ದಕ್ಕೂ ಭಕ್ತರಿಗೆ ಅನ್ನ ಸಂತರ್ಪಣೆ ಹಾಗೂ ಉಚಿತ ಆಟೋ ಸೇವೆ ಒದಗಿಸಲಾಗಿದೆ. ಮಹಾರಥೋತ್ಸವದಲ್ಲಿ ಲಕ್ಷಾಂತರ ಭಕ್ತರು ಭಾಗಿಯಾಗಿದ್ದರು.
ಕಾರವಾರ ರಸ್ತೆಯುದ್ದಕ್ಕೂ ಭಕ್ತರಿಗೆ ಪಲಾವ್, ಮಜ್ಜಿಗೆ, ಹಣ್ಣುಹಂಪಲು ವಿತರಣೆ ಮಾಡಲಾಗಿದೆ. ಹುಬ್ಬಳ್ಳಿ ಧಾರವಾಡ ಸೇರಿದಂತೆ ರಾಜ್ಯದ ಹಲವು ಜಿಲ್ಲೆ ಹಾಗೂ ವಿವಿಧ ರಾಜ್ಯಗಳಿಂದ ಭಕ್ತರು ಆಗಮಿಸಿದ್ದಾರೆ. ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರ ದಂಡು ಹರಿದು ಬಂದಿದೆ.