ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಅದರಲ್ಲೂ, ಬೆಂಗಳೂರಿನಲ್ಲೇ ವೃತ್ತಿಜೀವನ ಆರಂಭಿಸಬೇಕು ಎಂಬ ಬಯಕೆ ಇದೆಯೇ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರೈಲ್ವೆ ಸುರಕ್ಷತಾ ಆಯೋಗದಲ್ಲಿ (CRS Senior Inspector Recruitment 2026) ಖಾಲಿ ಇರುವ 1 ಹುದ್ದೆಯ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ಹುದ್ದೆಯ ಹೆಸರು: ರೈಲ್ವೆ ಸುರಕ್ಷತಾ ಆಯೋಗ
ಹುದ್ದೆಗಳ ಸಂಖ್ಯೆ: 1
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 23
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಎರಡು ಸೀನಿಯರ್ ಇನ್ ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಮುಗಿಸಿರಬೇಕು. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 56 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ civilaviation.gov.in ಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆ ಓದಿಕೊಳ್ಳಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
Office of Commissioner of Railway Safety, 2nd Floor, Rail Sanraksha Bhawan, Behind Divisional Railway Manager Office, Bangalore -560023.



















