ಲಂಡನ್ : ಅಮೆರಿಕ ಮತ್ತು ಇರಾನ್ ನಡುವೆ ಯುದ್ಧ ವಿರಾಮ ಘೋಷಣೆಯಾದ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಕುಸಿತ ಕಂಡಿದೆ. ಈ ಬೆಳವಣಿಗೆಯು ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ದೊಡ್ಡ ಸಮಾಧಾನ ತಂದಿದೆ.
ಕದನ ವಿರಾಮದ ಸುದ್ದಿಯಿಂದಾಗಿ ಕಚ್ಚಾ ತೈಲದ(Crude Oil) ಬೆಲೆಗಳು ಒಂದೇ ದಿನದಲ್ಲಿ ಸುಮಾರು 13% ರಿಂದ 17% ರಷ್ಟು ಕುಸಿದಿವೆ. ಇದು ಕಳೆದ ಆರು ವರ್ಷಗಳಲ್ಲೇ ಒಂದೇ ದಿನ ಕಂಡ ಅತಿ ದೊಡ್ಡ ಕುಸಿತ ಇದಾಗಿದೆ.
ಅಮೆರಿಕದ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ (WTI) ಕಚ್ಚಾ ತೈಲದ ಬೆಲೆ ಸುಮಾರು 16.13 ಡಾಲರ್ (14.3%) ಇಳಿಕೆಯಾಗಿ ಪ್ರತಿ ಬ್ಯಾರೆಲ್‌ಗೆ 96.82 ಡಾಲರ್(8,940 ರೂ.) ತಲುಪಿದೆ.
ಜಾಗತಿಕ ಮಾನದಂಡವಾದ ಒಪೆಕ್ ದೇಶಗಳ ಬ್ರೆಂಟ್ (Brent) ಕಚ್ಚಾ ತೈಲದ ದರ 14.84 ಡಾಲರ್ (13.6%) ನಷ್ಟು ಕುಸಿದು ಪ್ರತಿ ಬ್ಯಾರೆಲ್‌ಗೆ 94.43 ಡಾಲರ್‌ಗೆ(8,720 ರೂ.) ಇಳಿಕೆಯಾಗಿದೆ. ಈ ಘೋಷಣೆಗೂ ಮುನ್ನ ಯುದ್ಧದ ಭೀತಿಯಿಂದಾಗಿ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 117 – 120 ಡಾಲರ್‌ವರೆಗೂ (11 ಸಾವಿರ ರೂ.ವರೆಗೆ) ಏರಿಕೆಯಾಗಿತ್ತು.
ಇರಾನ್ ಹಾರ್ಮುಜ್ ಜಲಸಂಧಿಯನ್ನು ತಕ್ಷಣವೇ ಮುಕ್ತಗೊಳಿಸಲು ಇರಾನ್ ಒಪ್ಪಿಗೆ ನೀಡಿದ್ದರಿಂದ ಮಾರುಕಟ್ಟೆಯಲ್ಲಿನ ಆತಂಕವನ್ನು ಕಡಿಮೆ ಮಾಡಿದೆ. ಜಗತ್ತಿನ ಸುಮಾರು 20% ತೈಲ ಪೂರೈಕೆ ಈ ಮಾರ್ಗದ ಮೂಲಕವೇ ನಡೆಯುವುದರಿಂದ ಪೂರೈಕೆ ಸಹಜ ಸ್ಥಿತಿಗೆ ಇಳಿದಿದೆ.
ಇದನ್ನೂ ಓದಿ : ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಸಿಎಂ ಹೈಟೆಕ್ ಕಛೇರಿ ಉದ್ಘಾಟನೆಗೆ ಸಿದ್ಧ!


















