ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಬೆಂಗಳೂರಿನಲ್ಲೇ ಇರುವ ಸಿಎಸ್ ಬಿ-ಇನ್ ಸ್ಟಿಟ್ಯೂಟ್ ಫಾರ್ ಸೆರಿ-ಬಯೋಟೆಕ್ನಲಾಜಿಕಲ್ ರಿಸರ್ಚ್ ಸೆಂಟರ್ ನಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ರೇಷ್ಮೆ ಕೃಷಿ ಸಹಾಯಕ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ಹುದ್ದೆಯ ಹೆಸರು: ಸಿಎಸ್ ಬಿ-ಇನ್ ಸ್ಟಿಟ್ಯೂಟ್ ಫಾರ್ ಸೆರಿ-ಬಯೋಟೆಕ್ನಲಾಜಿಕಲ್ ರಿಸರ್ಚ್ ಸೆಂಟರ್
ಹುದ್ದೆಗಳ ಸಂಖ್ಯೆ: 1
ಹುದ್ದೆ ಹೆಸರು: ರೇಷ್ಮೆ ಕೃಷಿ ಸಹಾಯಕ
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 6
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಪದವಿ ಪಡೆದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ. ಇದಾದ ನಂತರ ಸಂದರ್ಶನ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 21 ಸಾವಿರ ರೂ. ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ isbr.res.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿಟ್ಟುಕೊಂಡಿರಬೇಕು.
ಇದನ್ನೂ ಓದಿ :ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ಸ್ಪೋರ್ಟ್ಸ್ ಪರ್ಸನ್ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನ!



















