ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ರೇಷ್ಮೆ ಕೃಷಿ, ಸಂಸ್ಕರಣೆ ಮತ್ತು ನೂಲುವ ಕ್ಷೇತ್ರದ ಅಭಿವೃದ್ಧಿಗಾಗಿ ಸ್ಥಾಪಿಸಿರುವ ಕೇಂದ್ರ ರೇಷ್ಮೆ ಮಂಡಳಿಯಲ್ಲಿ (CSB Recruitment 2025) ಖಾಲಿ ಇರುವ 4 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಮೈಸೂರಿನಲ್ಲಿಯೇ ಕೇಂದ್ರ ಕಚೇರಿ ಹೊಂದಿರುವ ಸಂಸ್ಥೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕೇಂದ್ರ ರೇಷ್ಮೆ ಮಂಡಳಿ
ಹುದ್ದೆ ಹೆಸರು: ಪ್ರಾಜೆಕ್ಟ್ ಅಸಿಸ್ಟಂಟ್ ಇತ್ಯಾದಿ
ಒಟ್ಟು ಹುದ್ದೆ: 04
ಉದ್ಯೋಗ ಸ್ಥಳ: ಮೈಸೂರು
ಸಂದರ್ಶನದ ದಿನಾಂಕ: ಡಿಸೆಂಬರ್ 10
ಜೂನಿಯರ್ ರಿಸರ್ಚ್ ಫೆಲೋ ಹಾಗೂ ಪ್ರಾಜೆಕ್ಟ್ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಎಸ್ಸಿ ಹಾಗೂ ಎಂಎಸ್ಸಿ ಕೋರ್ಸ್ ಗಳನ್ನು ಮುಗಿಸಿದವರು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಸಂದರ್ಶನಕ್ಕೆ ಹಾಜರಾಗುವವರಿಗೆ ಕನಿಷ್ಠ 30ರಿಂದ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 21 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಒಬಿಸಿ, ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು csb.gov.in ವೆಬ್ ಸೈಟ್ ಗೆ ಭೇಟಿ ನೀಡಿ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳ
CSB-Central Sericultural Research Institute Manandavadi Road, Srirampura Mysore – 570008
ಇದನ್ನೂ ಓದಿ: ಮಂಡ್ಯ | ವಿದೇಶಿ ಟಗರು ಕಂಡು ಬೆರಗಾದ ಜನ ; ಇದು ಯಾವ ತಳಿ ಗೊತ್ತಾ?



















