ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಸೆಂಟ್ರಲ್ ಸಿಲ್ಕ್ ಬೋರ್ಡ್ ಸಂಸ್ಥೆಯಲ್ಲಿ ಖಾಲಿ ಇರುವ 14 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (CSB Recruitment 2026) ಹೊರಡಿಸಲಾಗಿದೆ. 14 ಯಂಗ್ ಪ್ರೊಫೇಷನಲ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಸೆಂಟ್ರಲ್ ಸಿಲ್ಕ್ ಬೋರ್ಡ್
ಒಟ್ಟು ಹುದ್ದೆಗಳು: 14
ಹುದ್ದೆಗಳ ಹೆಸರು: ಯಂಗ್ ಪ್ರೊಫೇಷನಲ್
ಉದ್ಯೋಗ ಸ್ಥಳ: ಕರ್ನಾಟಕ ಸೇರಿ ಹಲವೆಡೆ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 7
ಕರ್ನಾಟಕದ ಬೆಂಗಳೂರು ಹಾಗೂ ಮೈಸೂರು ಸೇರಿ ದೇಶದ ಹಲವೆಡೆ ನೇಮಕಾತಿ ನಡೆಯುತ್ತಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವಿರುವುದಿಲ್ಲ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸಿಎ, ಎಂಬಿಎ ಹಾಗೂ ಎಂ.ಕಾಂ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲು csb.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು estab2.csb@nic.in ಗೆ ಮೇಲ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 70 ಸಾವಿರ ರೂ. ಸಂಬಳ ನೀಡಲಾಗುತ್ತದೆ.
ಇದನ್ನೂ ಓದಿ ; ರಾಜ್ಯ ಸರ್ಕಾರದ SPLOCA ಸಂಸ್ಥೆಯಲ್ಲಿ ಟೈಪಿಸ್ಟ್ ಹುದ್ದೆಯ ನೇಮಕಾತಿ: 30 ಸಾವಿರ ರೂ. ಸಂಬಳ



















