ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಸೆಂಟ್ರಲ್ ಸಿಲ್ಕ್ ಬೋರ್ಡ್ ಸಂಸ್ಥೆಯಲ್ಲಿ ಖಾಲಿ ಇರುವ 82 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (CSB Recruitment 2026) ಹೊರಡಿಸಲಾಗಿದೆ. ರೇಷ್ಮೆ ಕೃಷಿ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವಿರ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಸೆಂಟ್ರಲ್ ಸಿಲ್ಕ್ ಬೋರ್ಡ್
ಒಟ್ಟು ಹುದ್ದೆಗಳು: 82
ಹುದ್ದೆಗಳ ಹೆಸರು: ರೇಷ್ಮೆ ಕೃಷಿ ಸಹಾಯಕ
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಏಪ್ರಿಲ್ 13
ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವಿರುವುದಿಲ್ಲ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಡಿಪ್ಲೋಮಾ, ಬಿಇ ಅಥವಾ ಬಿ ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲು csb.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡ ಬಳಿಕ ಆನ್ ಲೈನ್ ಅರ್ಜಿಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 21 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಪೃಥ್ವಿ ಶಾ ಅಬ್ಬರಕ್ಕೆ ಸಜ್ಜು.. ಯುವ ಓಪನರ್ ಬೆನ್ನಿಗೆ ನಿಂತ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್!



















