ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕೌನ್ಸಿಲ್ ಆಫ್ ಸೈಂಟಿಫಿಕ್ ಆ್ಯಂಡ್ ಇಂಡಸ್ಟ್ರಿಯಲ್ ರಿಸರ್ಚ್ ಸಂಸ್ಥೆಯಲ್ಲಿ ಖಾಲಿ ಇರುವ 43 ಹುದ್ದೆಗಳ ನೇಮಕಾತಿಗೆ (CSIR Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 43 ಟೆಕ್ನಿಶಿಯನ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕೌನ್ಸಿಲ್ ಆಫ್ ಸೈಂಟಿಫಿಕ್ ಆ್ಯಂಡ್ ಇಂಡಸ್ಟ್ರಿಯಲ್ ರಿಸರ್ಚ್
ಹುದ್ದೆಗಳು: 43
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 17
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ ಅಥವಾ ಐಟಿಐ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಒಬಿಸಿಯವರಿಗೆ ಮೂರು ವರ್ಷಗಳ ವಯೋಮಿತಿ ವಿನಾಯಿತಿ ಇದೆ. ಎಸ್ಸಿ, ಎಸ್ಟಿ, ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಉಳಿದವರಿಗೆ 500 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ csir.res.in ಗೆಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯನ್ನು ಆಯ್ಕೆ ಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ನೀನು ಬಂದ್ರೂ, ನಿಮ್ಮಪ್ಪ ಬಂದ್ರೂ ನಾನೇ ಶಾಸಕಿ : ಸಿಎಂ ರೇವಂತ್ ರೆಡ್ಡಿಗೆ ಸಚಿವರ ಮಗಳ ಸವಾಲು!



















