ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಆರೋಪದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅರೆಸ್ಟ್ ಆಗಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇರೆಗೆ ಎಫ್ ಐಆರ್ ದಾಖಲಿಸಿಕೊಂಡಿರುವ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅರೆಸ್ಟ್ ಮಾಡಿದ್ದಾರೆ. ಬಂಧಿಸುವ ಸಂದರ್ಭದಲ್ಲಿ ಸಿ.ಟಿ. ರವಿ ಹೈಡ್ರಾಮಾ ಮಾಡಿದ್ದಾರೆ.



ಸದನದೊಳಿಗೆ ಅಶ್ಲೀಲ ಪದಿಂದ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇಲೆಗೆ ಬಿಜೆಪಿ ಎಂಎಲ್ಸಿ ಸಿಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅವಾಚ್ಯಪದ ಬಳಕೆ ಆರೋಪದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮದೇ ಲೆಟರ್ಹೆಡ್ ಮೇಲೆ ಹಿರೇಬಾಗೇವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಹೀಗಾಗಿ ಸಿಟಿ ರವಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಎಫ್ ಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು. ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಲೈಂಗಿಕ ಬಣ್ಣದ ಟೀಕೆ ಎಂದು ಎಫ್ ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.