ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ. ರವಿ ಅಸಭ್ಯ ಪದ ಬಳಕೆ ಮಾಡಿದ್ದು, ಕ್ರಿಮಿನಲ್ ಸ್ವರೂಪದ ಅಪರಾಧವಾಗಿದೆ. ಈ ಸಂಬಂಧ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಭಾಪತಿಗಳಿಗೆ ಮತ್ತು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರಿನ ಕುರಿತು ಏನು ಕ್ರಮ ಕೈಗೊಳ್ಳುತ್ತಾರೆ ಎಂಬುವುದನ್ನು ನೋಡಬೇಕಿದೆ. ಸಿ.ಟಿ.ರವಿ ಹತ್ತಕ್ಕೂ ಹೆಚ್ಚು ಬಾರಿ ಅತ್ಯಂತ ಕೀಳು ಪದದಿಂದ ನಿಂದನೆ ಮಾಡಿದ್ದಾರೆ ಎಂದು ಅಲ್ಲಿದ್ದ ನಮ್ಮ ಪರಿಷತ್ ಸದಸ್ಯರು ಹೇಳುತ್ತಿದ್ದಾರೆ. ರವಿ ಮಾತಿನಿಂದ ನೊಂದು ಲಕ್ಷ್ಮೀ ಹೆಬ್ಬಾಳ್ಕರ್ ಅವರು ದೂರು ದಾಖಲಿಸಿದ್ದಾರೆ. ಇದು ಲೈಂಗಿಕ ದೌರ್ಜನ್ಯದಂತಹ ಪ್ರಕರಣವಾಗಿರುವುದರಿಂದ ಪೊಲೀಸರು ಕ್ರಿಮಿನಲ್ ಪ್ರೊಸಿಜರ್ ರೀತಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.