ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆಂಬ ಕಾರಣಕ್ಕೆ ಬಿಜೆಪಿ ಶಾಸಕ ಸಿ.ಟಿ. ರವಿ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಕೋರ್ಟ್ ನಲ್ಲಿ ರವಿ ಕಣ್ಣೀರು ಸುರಿಸಿದ್ದಾರೆ ಎನ್ನಲಾಗಿದೆ.
ಬೆಳಗಾವಿ ಜೆಎಂಎಫ್ಸಿ ಕೋರ್ಟ್ ಗೆ ಹಾಜರು ಪಡಿಸಿದ್ದರು. ಅಲ್ಲದೇ, ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು. ಈ ವೇಳೆ ಹಲವಾರು ಆರೋಪಗಳನ್ನು ಸಿ.ಟಿ. ರವಿ ಮಾಡಿದ್ದಾರೆ. ವಿಧಾನಸಭಾ ಕಾರಿಡಾರ್ನಲ್ಲಿ, ‘‘ನಿನ್ನ ಹೆಣ ಚಿಕ್ಕಮಗಳೂರಿಗೆ ಹೋಗುತ್ತೆ’’ ಎಂದು ಮಂತ್ರಿ ಧಮಕಿ ಹಾಕಿದ್ದರು. ರಾತ್ರಿ ನನ್ನನ್ನು ಪೊಲಿಸರು ಎಲ್ಲೆಲ್ಲೋ ಕರೆದೊಯ್ಯತ್ತಿದ್ದರು. ದೇವರ ಮೇಲೆ ಭಾರ ಹಾಕಿ ನಾನು ಹೋದೆ. ‘‘ನಿಮ್ಮನ್ನ ನೋಡಿಕೊಳ್ಳುತ್ತೇವೆ’’ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಡಿಕೆ ಶಿವಕುಮಾರ್ ಕೌನ್ಸಿಲ್ ಹಾಲ್ ಒಳಗೆ ಗುಡುಗಿದರು. ಹೀಗಾಗಿ ನನಗೆ ನಿದ್ದೆ ಬರಲಿಲ್ಲ. ಪೊಲೀಸರು ಕೂಡ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಖಾನಾಪುರದಲ್ಲಿ ನನಗೆ ಹೊಡೆದರು, ತಲೆಯಲ್ಲಿ ರಕ್ತ ಬರುತ್ತಿತ್ತು ಎಂದು ಜಡ್ಜ್ ಬಳಿ ಸಿಟಿ ರವಿ ಹೇಳಿದರು. ಯಾರು ಹೊಡೆದರು ಎಂದು ಗೊತ್ತಾಗಲಿಲ್ಲ. ಪೊಲಿಸರೇ ಹೊಡೆದಿರಬಹುದು, ಅವರೇ ಎತ್ತಿಕೊಂಡು ಹೋದರು ಎಂದರು.
ಸಿಟಿ ರವಿ ಪರ ಜಿರಲಿ ವಾದ ಮಂಡಿಸಿದರು. ಪ್ರತಿ 10 ನಿಮಿಷಕ್ಕೆ ಒಮ್ಮೆ ಪೊಲೀಸರಿಗೆ ಯಾರದ್ದೋ ಕರೆ ಬರುತ್ತಾ ಇತ್ತು. ಅವರ ಸೂಚನೆಯಂತೆ ಪೊಲಿಸರು ವರ್ತಿಸುತ್ತಿದ್ದರು. ರವಿ ನನಗೂ ಯಾವ ಕಾರಣಕ್ಕೆ ಅರೆಸ್ಟ್ ಎಂದು ತಿಳಿಸಿಲ್ಲ. ನಾನು ಕೂಡ ಕೇಳಿದರೂ ಹೇಳಿಲ್ಲ. ರವಿ ಅವರು ನಿನ್ನೆ ನಡದ ಘಟನೆಯಿಂದ ಭಾವನಾತ್ಮಕವಾಗಿ ನೊಂದಿದ್ದಾರೆ. ಪೊಲಿಸರು ಅವರ ವಾಚ್ ಕಿತ್ತುಕೊಳ್ಳುವ ಪ್ರಯತ್ನ ಮಾಡಿದ್ದಾರೆ ಎಂದು ರವಿ ಪರ ವಕೀಲರು ಮಾಹಿತಿ ನೀಡಿದರು.
ಜಾಮೀನು ರಹಿತ ಪ್ರಕರಣದಲ್ಲಿ ಬಂಧನಕ್ಕೊಳಗಾದಾಗ ಸೆಕ್ಷನ್ 480ಅಡಿ ಜಾಮೀನಿಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ. ರವಿ ಸಾಮಾನ್ಯ ವ್ಯಕ್ತಿಯಲ್ಲ. ಅವರು ರೌಡಿಯೂ ಅಲ್ಲ. ಘಟನೆ ನಡೆದಿದ್ದು ಸುವರ್ಣ ವಿಧಾನ ಸೌಧದಲ್ಲಿ. ಅವರ ಬಂಧನಕ್ಕೆ ಸಭಾಪತಿ ಅನುಮತಿ ಅಗತ್ಯ ಇದೆ. ಪೊಲಿಸರು ಯಾವುದೇ ಪ್ರಕ್ರಿಯೆಗಳನ್ನು ಸರಿಯಾಗಿ ಮಾಡಿಲ್ಲ ಎಂದು ವಕೀಲರ ವಾದಿಸಿದ್ದಾರೆ.