ಬೆಂಗಳೂರು : ತೊಗರಿ ಕಣಜ ಕಲಬುರಗಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ಜೂನಿಯರ್ ರಿಸರ್ಚ್ ಫೆಲೋ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ
ಒಟ್ಟು ಹುದ್ದೆಗಳು: 1
ಹುದ್ದೆಗಳ ಹೆಸರು: ಜೂನಿಯರ್ ರಿಸರ್ಚ್ ಫೆಲೋ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 29
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಕೆಮಿಸ್ಟ್ರಿ, ಆರ್ಗಾನಿಕ್ ಕೆಮಿಸ್ಟ್ರಿಯಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರು. ಗೇಟ್ ಹಾಗೂ ನೆಟ್ ಪರೀಕ್ಷೆಗಳ ಫಲಿತಾಂಶವೂ ನೇಮಕಾತಿಗೆ ಪ್ರಮುಖ ಮಾನದಂಡವಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಮೊದಲಿಗೆ 6 ತಿಂಗಳ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಇದಾದ ಬಳಿಕ ಮೂರು ವರ್ಷಗಳವರೆಗೆ ಕಾರ್ಯಾವಧಿಯನ್ನು ವಿಸ್ತರಣೆ ಮಾಡಬಹುದು. ನೇಮಕಾತಿ ಹೊಂದಿದವರಿಗೆ ಮಾಸಿಕ 42 ಸಾವಿರ ರೂಪಾಯಿವರೆಗೆ ಫೆಲೋಶಿಪ್ ನೀಡಲಾಗುತ್ತದೆ. ಅರ್ಜಿಗಳನ್ನು ಸಲ್ಲಿಸಲು ಬಯಸುವವರು ಮೊದಲಿಗೆ cuk.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ದಾಖಲೆಗಳ ಸಾಫ್ಟ್ ಕಾಪಿಗಳನ್ನು duraippandi@cuk.ac.in ಗೆ ಮೇಲ್ ಮಾಡಬೇಕು.
ಇದನ್ನೂ ಓದಿ : ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!



















