ಬೆಳಗಾವಿ: ವಿಡಿಯೋ ಕಾಲ್ ಮಾಡಿ ನಗ್ನ ಚಿತ್ರಗಳಿವೆ ಎಂದು ಸೈಬರ್ ಖದೀಮರು ಬೆದರಿಸಿದ್ದಕ್ಕೆ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬಿಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಿವೃತ್ತ ರೈಲ್ವೆ ಉದ್ಯೋಗಿ ಡಿಯಾಗೋ ನಜರತ್ (83), ಪಾವಿಯಾ ನಜರತ್ (79) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಸೈಬರ್ ಖದೀಮರು ಕಳೆದ ಒಂದು ತಿಂಗಳಿಂದ ವೃದ್ಧ ದಂಪತಿಯ ಬೆನ್ನು ಬಿದ್ದಿದ್ದಾರೆ.
ಪೊಲೀಸರೆಂದು ಹೇಳಿಕೊಂಡು ನಿಮ್ಮ ನಗ್ನ ಚಿತ್ರಗಳಿವೆ ಎಂದು ವೃದ್ಧ ದಂಪತಿಗೆ ವಿಡಿಯೋ ಕಾಲ್ ಮಾಡಿ ಹೆದರಿಸಿದ್ದಾರೆ. ಕೇಳಿದಷ್ಟು ಹಣ ಕೊಡದಿದ್ದರೆ ನಗ್ನ ಚಿತ್ರಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಹೆದರಿದ ವೃದ್ಧ ದಂಪತಿ ಖದೀಮರ ಅಕೌಂಟ್‌ಗೆ 6 ಲಕ್ಷ ರೂ. ಹಣ ವರ್ಗಾವಣೆ ಮಾಡಿದ್ದಾರೆ.
ಆದರೂ ಸುಮ್ಮನಾಗದ ಖದೀಮರು ಹಣಕ್ಕಾಗಿ ಪೀಡಿಸಿದ್ದಾರೆ. ಖದೀಮರ ಕಿರಿಕಿರಿಗೆ ಬೇಸತ್ತು ಪಾವಿಯಾ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತ್ನಿ ಆತ್ಮಹತ್ಯೆಗೆ ಶರಣಾಗುತ್ತಿದ್ದಂತೆ ಪತಿ ಡಿಯಾಗೋ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಾಕುವಿನಿಂದ ಕತ್ತು ಕೂಯ್ದುಕೊಂಡು ಡಿಯಾಗೋ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ನಂದಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.