ಕೋಲಾರ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಒಂದು ಅಂತಸ್ತಿನ ಮನೆ ಕುಸಿದ ಪರಿಣಾಮ ಬಾಲಕಿ ಸಾವನ್ನಪ್ಪಿ ನಾಲ್ವರು ಗಾಯಗೊಂಡ ಘಟನೆ ಜಿಲ್ಲೆಯ ಮುಳಬಾಗಿಲು ನಗರದಲ್ಲಿ ನಡೆದಿದೆ.
ನಗರದ ಜಹಾಂಗಿರ್ ಮೊಹಲ್ಲಾದಲ್ಲಿ ಬೆಳಗ್ಗೆ ಸುಮಾರು 5:30ರ ಸುಮಾರಿಗೆ ಅಡುಗೆಗಾಗಿ ಗ್ಯಾಸ್ ಹಚ್ಚುವ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಮನೆ ಸಂಪೂರ್ಣವಾಗಿ ಕುಸಿದಿದೆ. ಈ ದುರ್ಘಟನೆಯಲ್ಲಿ ಮಾಹಿನ್ (12) ಮೃತಪಟ್ಟಿದ್ದು, ಆಕೆ ಸುಹೇಲ್ ಮತ್ತು ಕೌಸರ್ ದಂಪತಿಗಳ ಪುತ್ರಿಯಾಗಿದ್ದಾಳೆ. ಮನೆಯಲ್ಲಿದ್ದ ಸುಹೇಲ್, ಕೌಸರ್, ಉಜೇರ್ ಹಾಗೂ ಆಯನ್ ಅವರಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಈ ಸಂಬಂಧ ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು



















