ಹಾವೇರಿ: ಸಿಲಿಂಡರ್ ಸ್ಫೋಟಗೊಂಡು ಮೂರು ಗುಡಿಸಲುಗಳು ಹೊತ್ತಿ ಉರಿದಿರುವ ಘಟನೆ ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ನಡೆದಿದೆ. ವೃದ್ದೆ ಚಿನ್ನವ್ವ ಅಣ್ಣಿ ಎಂಬುವವರಿಗೆ ಸೇರಿದ ಗುಡಿಸಲಿನಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, ಸ್ಫೋಟದ ಪರಿಣಾಮ ಅಕ್ಕಪಕ್ಕದಲ್ಲಿದ್ದ 2 ಗುಡಿಸಲುಗಳಿಗೂ ಆವರಿಸಿದೆ.
ಬೆಂಕಿಯ ಕೆನ್ನಾಲಿಗೆಗೆ ಮೂರು ಗುಡಿಸಲುಗಳು ಸುಟ್ಟು ಭಸ್ಮವಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹಾವೇರಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.