ಬೆಂಗಳೂರು: ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದೆ. ಪೊಲೀಸ್ ಇಲಾಖೆ ಕೂಡ ಅಲರ್ಟ್ ಆಗಿದೆ. ಈ ಮಧ್ಯೆ ಸಾರಿಗೆ ಸಂಸ್ಥೆ ಕೂಡ ಜನರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಓಡಿಸಲು ನಿರ್ಧರಿಸಿದೆ.
ಡಿ. 31ರ ರಾತ್ರಿ ನಗರದ ಎಂಜಿ ರಸ್ತೆ, ಕೋರಮಂಗಲ, ಬ್ರಿಗೇಡ್ ರೋಡ್ ಗಳಲ್ಲಿ ಹೊಸ ವರ್ಷಾಚರಣೆ ಭರ್ಜರಿಯಾಗಿ ನಡೆಯುತ್ತದೆ. ಹೀಗಾಗಿ ಈ ರಸ್ತೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವುದರಿಂದ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಹೀಗಾಗಿ ನಮ್ಮ ಮೆಟ್ರೋ, ಬಿಎಂಟಿಸಿ ಬಳಸುವಂತೆ ಬೆಂಗಳೂರು ನಗರ ಸಂಚಾರಿ ಪೊಲೀಸರು (Bengaluru Trafic Police) ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಸಾರಿಗೆ (BMTC)ಯು ಎಂ.ಜಿ ರಸ್ತೆಯಿಂದ ನಗರದ ವಿವಿಧ ಪ್ರದೇಶಗಳಿಗೆ ಹೆಚ್ಚುವರಿ ಬಸ್ ಓಡಿಸಲಿದೆ.
ಜನದಟ್ಟಣೆ ಇರುವ ಪ್ರಮುಖ ಬಸ್ ನಿಲ್ದಾಣ, ಜಂಕ್ಷನ್ಗಳಿಂದಲೂ ಬಸ್ ವ್ಯವಸ್ಥೆ ಮಾಡಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣ, ಕೆ.ಆರ್.ಮಾರುಕಟ್ಟೆ, ಶಿವಾಜಿನಗರ, ಕೋರಮಂಗಲ, ಕಾಡುಗೋಡಿ, ಕೆಂಗೇರಿ, ಸುಮನಹಳ್ಳಿ, ಗೊರಗುಂಟೆಪಾಳ್ಯ, ಯಶವಂತಪುರ, ಯಲಹಂಕ, ಶಾಂತಿನಗರ, ಬನಶಂಕರಿ, ಹೆಬ್ಬಾಳ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ಗಳಿಂದ ಪ್ರಯಾಣಿಕರ ದಟ್ಟಣೆ ಅನುನುಗುಣವಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು. ಬಿಎಂಟಿಸಿ ಒಟ್ಟು 13 ಸ್ಥಳಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದೆ. ಈ ಬಸ್ ಗಳು ರಾತ್ರಿ 11ರಿಂದ ಬೆಳಗಿನ 2 ಗಂಟೆಯವರೆಗೆ ಸಂಚರಿಸಲಿವೆ.
ಯಾವ ಮಾರ್ಗಗಳಲ್ಲಿ ಹೆಚ್ಚುವರಿ ಬಸ್ ಸಂಚಾರ
ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ
G-3 ಬ್ರಿಗೇಡ್ ರಸ್ತೆ ಎಲೆಕ್ಟ್ರಾನಿಕ್ಸ್ ಸಿಟಿ
G-4 ಬ್ರಿಗೇಡ್ ರಸ್ತೆ ಜಿಗಣಿ
G-2 ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣ ಸರ್ಜಾಪುರ
G-6 ಎಂ.ಜಿ.ರಸ್ತೆ ಕೆಂಗೇರಿ ಕೆ.ಹೆಚ್.ಬಿ. ಕ್ವಾರ್ಟ್ರ್ಸ್
G-7 ಎಂ.ಜಿ.ರಸ್ತೆ ಜನಪ್ರಿಯ ಟೌನ್ ಶಿಪ್
G-8 ಎಂ.ಜಿ.ರಸ್ತೆ ನೆಲಮಂಗಲ
G-9 ಎಂ.ಜಿ.ರಸ್ತೆ ಯಲಹಂಕ ಉಪನಗರ 5ನೇ ಹಂತ
G-10 ಎಂ.ಜಿ.ರಸ್ತೆ ಯಲಹಂಕ
G-11 ಎಂ.ಜಿ.ರಸ್ತೆ ಬಾಗಲೂರು
317-G ಎಂ.ಜಿ.ರಸ್ತೆ ಹೊಸಕೋಟೆ
SBS-13K ಎಂ.ಜಿ.ರಸ್ತೆ ಚನ್ನಸಂದ್ರ
SBS-1K ಎಂ.ಜಿ.ರಸ್ತೆ ಕಾಡುಗೋಡಿ
13 ಎಂ.ಜಿ.ರಸ್ತೆ ಬನಶಂಕರಿ ಗೆ ಹೆಚ್ಚುವರಿ ಬಸ್ ಬಿಡಲಾಗುತ್ತಿದೆ.