ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಡಿ. 31ಕ್ಕೆ ಮುಷ್ಕರ ನಡೆಸಲು ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಆರು ಸಾರಿಗೆ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿವೆ. ಡಿ. 31ರ ಮುಷ್ಕರ ಯಶಸ್ವಿಗೊಳಿಸಬೇಕೆಂದು ಈಗಾಗಲೇ ಮುಖಂಡರು ಕರಪತ್ರ ಹಂಚಿಕೆ ಮಾಡುತ್ತಿದ್ದಾರೆ.
ಜ. 1ರಿಂದ ಬಸ್ ಗಳು ರಸ್ತೆಗೆ ಇಳಿಯುವುದಿಲ್ಲ ಎಂದು ಪ್ರಯಾಣಿಕರಿಗೆ ಮತ್ತು ಸಾರಿಗೆ ನೌಕರರಿಗೆ ಕರಪತ್ರ ಹಂಚಿಕೆ ಮಾಡಲಾಗಿದೆ. ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಬಾಕಿ ಹಣ 2 ಸಾವಿರ ಕೋಟಿ ಇದೆ. ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.
ಈಗಾಗಲೇ ಸರ್ಕಾರಕ್ಕೆ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ನೋಟಿಸ್ ನೀಡಿದೆ. ಮುಷ್ಕರಕ್ಕೂ 21 ದಿನಗಳ ಮುನ್ನ ಆರು ಸಾರಿಗೆ ನೌಕರರ ಸಂಘಟನೆಗಳು ಸೇರಿ ಮುಷ್ಕರಕ್ಕೆ ಕರೆ ನೀಡಿವೆ. ಆದರೆ, ಇದುವರೆಗೂ ಸರ್ಕಾರವು ನೌಕರರೊಂದಿಗೆ ಮಾತುಕತೆ ನಡೆಸಿಲ್ಲ.