ಬೆಳಗಾವಿ ಆಧಿವೇಶನ ಡಿ. 9ರಿಂದ ಆರಂಭವಾಗಲಿದ್ದು, ಅಷ್ಟರಲ್ಲಿ ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಸಿಗಬೇಕು. ಇಲ್ಲವಾದರೆ, ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದ್ದಾರೆ.
ಮುಖ್ಯಮಂತ್ರಿಯವರು ಯಾವುದೇ ಕಾಯ್ದೆ-ಕಾನೂನಿನ ನೆಪ ಹೇಳದೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಘೋಷಿಸದಿದ್ದರೆ ಅಧಿವೇಶನ ನಡೆಯಲು ಬಿಡುವುದಿಲ್ಲ, ಪಂಚಮಸಾಲಿ ಸಮುದಾಯದ 10 ಸಾವಿರ ವಕೀಲರು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ ಎಂದು ಸ್ವಾಮೀಜಿ ಎಚ್ಚರಿಸಿದ್ದಾರೆ.
ಪಂಚಮಸಾಲಿ ಸಮುದಾಯ ನಡೆಸುತ್ತಿರುವ 2ಎ ಮೀಸಲಾತಿಗೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದ ಸಭೆಯಲ್ಲಿ ಭಾಗವಹಿಸಿದ ನಂತರ ಅವರು ಹೇಳಿದ್ದಾರೆ. ಸರ್ಕಾರದ ಜೊತೆ ಆರೋಗ್ಯಕರ ಸಭೆ ನಡೆದದ್ದೂ ನಿಜವಾದರೂ 2ಎ ಮೀಸಲಾತಿಯನ್ನು ನಿರ್ದಿಷ್ಟ ಗಡುವಿನೊಳಗೆ ಜಾರಿ ಮಾಡುವ ಕುರಿತು ಸಿಎಂ ಸ್ಪಷ್ಟತೆ ನೀಡಿಲ್ಲ ಎಂದು ಹೇಳಿದ್ದಾರೆ.


















