ಬೆಂಗಳೂರು: ಹಿರಿಯ ಸಚಿವ ಕೆಎನ್ ರಾಜಣ್ಣ ವಿರುದ್ಧ ಹನಿಟ್ರ್ಯಾಪ್ ನಡೆದಿರುವ ವಿಷಯ ರಾಜಕೀಯ ವಲಯದಲ್ಲಿ ದೊಡ್ಡ ಬಿರುಗಾಳಿ ಬೀಸಿದೆ. ಇದರ ಹಿಂದೆ ರಾಜಕೀಯ ಇದೆ ಎಂಬ ಆರೋಪ ಕೇಳಿ ಬರುತ್ತಿದೆ. ಇದರ ಹಿಂದೆ ಇರುವವರನ್ನು ಹಿಡಿಯಬೇಕೆಂದು ರಾಜಣ್ಣ ಸದನದಲ್ಲಿ ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ಈ ಹನಿಟ್ರ್ಯಾಪ್ ವಿಚಾರದ ಬಗ್ಗೆ ಚರ್ಚೆಯಾಗುತ್ತಿರುವಾಗಲೇ ಬಿಜೆಪಿ ಶಾಸಕ ಮುನಿರತ್ನ ಈಗ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.
ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಂದ ಅನ್ಯಾಯ ಆಗಿದೆ. ನನ್ನ ವಿರುದ್ಧ ಅತ್ಯಾಚಾರದ ಕೇಸ್ ಹಾಕಿಸಿದ್ದಾರೆ. ನೀನು ರಾಜೀನಾಮೆ ಕೊಟ್ಟರೆ ಮಾತ್ರ ಜಾತಿ ನಿಂದನೆ ಕೇಸ್ ವಾಪಸ್ ಪಡೆಯುತ್ತೇನೆ ಎಂದು ನನಗೆ ಧಮ್ಕಿ ಹಾಕಿದ್ದಾರೆ. ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಹೆಚ್.ಡಿ ರೇವಣ್ಣ ಮೇಲೂ ಇದೇ ಕುತಂತ್ರ ಮಾಡಿದ್ರು. ಈಗ ಸಚಿವ ರಾಜಣ್ಣ ಅವರ ಮೇಲೆ ಮಾಡಿದ್ದಾರೆ. ನಿಮ್ಮ ಹನಿಟ್ರ್ಯಾಪ್ ಟೀಂ ನನಗೆ ಗೊತ್ತಿದೆ. ನೀವು ರಾತ್ರಿ ಮಿಟೀಂಗ್ ಮಾಡಿದ್ದು ಗೊತ್ತಿದೆ ಎಂದು ಡಿಕೆಶಿ ವಿರುದ್ಧ ಆರೋಪ ಮಾಡಿದ್ದಾರೆ.
ನನ್ನ ಬಳಿ ಸಿಸಿಟಿವಿ, ಆಡಿಯೋ ಎಲ್ಲಾ ಸಾಕ್ಷಿಗಳು ಇವೆ. ರಮೇಶ್ ಜಾರಕಿಹೊಳಿ, ನಾನು ಕಾಂಗ್ರೆಸ್‌ನಲ್ಲಿ ಇದ್ದಿದ್ದು. ರಾಜಣ್ಣ ಸಹ ಕಾಂಗ್ರೆಸ್ ನಲ್ಲಿ ಇರುವುದು. ಇದು ಒಳ್ಳೆಯದು ಅಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಶಾಸಕ ಮುನಿರತ್ನ ಆರೋಪಿಸಿದ್ದಾರೆ.