ರಾಮನಗರ: ಕನಕಪುರ ಬಮೂಲ್ ನಿರ್ದೇಶಕ ಸ್ಥಾನದ ಚುನಾವಣೆಗೆ ಮಾಜಿ ಸಂಸದ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಇಂದು ಬೆಳಗ್ಗೆ 11ಕ್ಕೆ ಮಾಜಿ ಸಂಸದ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿನ ಡೇರಿ ಸರ್ಕಲ್ ನ ಬಮೂಲ್ ಕಚೇರಿಗೆ ತೆರಳಿ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದರಿಂದಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. KMF ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಡಿ.ಕೆ. ಸುರೇಶ್, ಕೊನೆಯ ದಿನದವರೆಗೂ ಗುಟ್ಟು ಬಿಟ್ಟು ಕೊಡದೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.