ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಸುರಿಯುತ್ತಿರುವ ಮಳೆ ಹಾಗೂ ಹವಾಮಾನ ಬದಲಾವಣೆಗೆ ಜನರು ಕಂಗಾಲಾಗಿದ್ದಾರೆ.
ಪಶ್ಚಿಮ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಶನಿವಾರ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಡಿ.17 ರಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿ.17 ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗಲಿದ್ದು, ಡಿ.19, 19 ಮತ್ತು 20 ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
ದಕ್ಷಿಣ ಕರಾವಳಿಯಲ್ಲಿ ಡಿ. 17ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಮತ್ತು ಹಾಸನದಲ್ಲಿ ಕೆಲವೆಡೆ ಹಗುರವಾದ ಮಳೆಯಾಗುವ ಸಾಧ್ಯತೆ ಇದೆ.
ಡಿಸೆಂಬರ್ 18 ರಂದು ದಕ್ಷಿಣ ಒಳ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಕರ್ನಾಟಕ ಮತ್ತು ಉತ್ತರ ಒಳ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಕಂಗಾಲಾಗಿದ್ದಾರೆ. ಬೆಳೆಗಳು ನೀರುಪಾಲಾಗಿ ನಷ್ಟ ಉಂಟಾಗುತ್ತಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.