ರಾಜ್ಯದ ಹಲವು ಜಿಲ್ಲೆಗಳಿಗೆ ಮತ್ತೆ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಜ್ಯದ 19ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿ. 28ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದಕ್ಷಿಣ ಒಳನಾಡಿನ ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಉತ್ತರ ಒಳನಾಡಿನ ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಚಳಿಯ ಪ್ರಮಾಣ ಕಡಿಮೆ ಇದೆ. ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗುತ್ತಿದ್ದು, ತಮಿಳುನಾಡು, ಆಂಧ್ರಪ್ರದೇಶದ ಜತೆ ಕರ್ನಾಟಕದಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ.


















