ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಖಾಝಿ ಶೈಖುನಾ ಅಲ್‌ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು. ಮುಸ್ಲಿಂ ಸಮುದಾಯದಲ್ಲಿ ಉನ್ನತ ಸ್ಥಾನ ಅಲಂಕರಿಸಿದ್ದ ಮುಸ್ಲಿಯಾರ್ ಅವರು ತಮ್ಮ ಸೇವೆಗಳ ಮೂಲಕ ಅಪಾರ ಗೌರವ ಗಳಿಸಿದ್ದರು. ಅವರ ನಿಧನದಿಂದ ಸಮುದಾಯಕ್ಕೆ ದೊಡ್ಡ ನಷ್ಟವಾಗಿದೆ. ಖಾಝಿ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.


















