ಬೆಂಗಳೂರು: ನೀವು ದಕ್ಷಿಣ ಕನ್ನಡ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಹಂಬಲಿಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಕಾದಿದೆ. ಹೌದು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಒಂದು ಹುದ್ದೆಯ (Dakshina Kannada Zilla Panchayat Recruitment 2025) ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟಂಟ್ ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಯ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಪಂಚಾಯಿತಿ, ದಕ್ಷಿಣ ಕನ್ನಡ
ಹುದ್ದೆ ಹೆಸರು: ಅಸಿಸ್ಟಂಟ್ ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಮ್ಯಾನೇಜರ್
ಒಟ್ಟು ಹುದ್ದೆಗಳು: 01
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಡಿಸೆಂಬರ್ 20
ಮಂಗಳೂರಿನಲ್ಲಿರುವ ಜಿಲ್ಲಾ ಪಂಚಾಯಿತಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಸಿಎ, ಬಿಇ ಅಥವಾ ಬಿ ಟೆಕ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 21 ವರ್ಷದಿಂದ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ ಸೈಟ್ zpdk.karnataka.gov.in ಗೆ ಭೇಟಿ ನೀಡಬೇಕು.
- ನಿಮ್ಮ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು.
- ಹುದ್ದೆಯ ಅಧಿಸೂಚನೆ ಓದಬೇಕು
- ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ಓಪನ್ ಮಾಡಬೇಕು
- ಯಾವುದೇ ತಪ್ಪಿಲ್ಲದೆ ಎಲ್ಲ ವಿವರಗಳನ್ನು ಭರ್ತಿ ಮಾಡಬೇಕು
- ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
- ಫ್ಯೂಚರ್ ರೆಫರೆನ್ಸ್ ಗಾಗಿ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ನಿಮ್ಹಾನ್ಸ್ ಸಂಸ್ಥೆಯಲ್ಲಿ ಟೆಕ್ನಿಶಿಯನ್ ಹುದ್ದೆಗಳು ಖಾಲಿ | 35 ಸಾವಿರ ರೂ. ಸ್ಯಾಲರಿ



















