ಕೊಪ್ಪಳ: ಮರಕುಂಬಿ ಗ್ರಾಮದಲ್ಲಿ ನಡೆದ ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲಾ ಕೋರ್ಟ್ ನೀಡಿದ್ದ ಜೀವಾವಧಿ ಶಿಕ್ಷೆಗೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನಿಡಿದೆ.
ಹೀಗಾಗಿ 98 ಜನ ಅಪರಾಧಿಗಳಲ್ಲಿ 97 ಜನರಿಗೆ ಧಾರವಾಡ ಹೈಕೋರ್ಟ್ ಪೀಠ ಜಾಮೀನು ನೀಡಿದೆ. ಪ್ರಕರಣದ ಎ1 ಮಂಜುನಾಥ ಜಾಮೀನಿಗೆ ಅರ್ಜಿ ಸಲ್ಲಿಸಿರಲಿಲ್ಲ. ಹೀಗಾಗಿ ಆತನಿಗೆ ಬೇಲ್ ಸಿಕ್ಕಿಲ್ಲ. ಇನ್ನುಳಿದಂತೆ ಎಲ್ಲರಿಗೂ ಜಾಮೀನು ಸಿಕ್ಕಿದೆ. ಅಲ್ಲದೇ, ಐದು ವರ್ಷ ಶಿಕ್ಷೆಗೆ ಗುರಿಯಾಗಿದ್ದ ಇಬ್ಬರು ಆರೋಪಿಗಳಿಗೂ ಜಾಮೀನು ಸಿಕ್ಕಿದೆ.
2014 ರ ಆಗಸ್ಟ್ 28 ರಂದು ದಲಿತರು ಹಾಗೂ ಸವರ್ಣಿಯರ ನಡುವೆ ಗಲಾಟೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅ. 28ರಂದು ಕೊಪ್ಪಳ ಜಿಲ್ಲಾ ನ್ಯಾಯಾಲಯ ಜೀವಾವದಿ ಶಿಕ್ಷೆ ವಿಧಿಸಿತ್ತು. ತೀರ್ಪು ಪ್ರಶ್ನಿಸಿ ಅಪರಾಧಿಗಳು ಧಾರವಾಡ ಹೈಕೋರ್ಟ ಮೊರೆ ಹೋಗಿದ್ದರು. ಆದರೆ, ಹೈಕೋರ್ಟ್ ದ್ವೀಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿ, ಜಮೀನು ನೀಡಿದೆ.
ಈ ಪ್ರಕರಣವನ್ನು ಆರಂಭದಲ್ಲಿ ಸೆಷನ್ ಕೋರ್ಟ್ ವಿಚಾರಣೆ ನಡೆಸಿತ್ತು. ನಂತರ, 2015ರಲ್ಲಿ ಪ್ರಕರಣ ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಲಯಕ್ಕೆ ವರ್ಗಾವಣೆಯಾಗಿತ್ತು. ವಿಚಾರಣೆ ನಡೆಸಿದ್ದ ನ್ಯಾಯಾಧೀಶರು, ಘಟನೆಯಲ್ಲಿ ಬಾಗಿಯಾಗಿದ್ದ 101 ಜನರು ಅಪರಾಧಿಗಳು ಎಂದು ಘೋಷಿಸಿದ್ದರು. ಈ ಪೈಕಿ ಹಲವರು ಇಹಲೋಕ ತ್ಯಜಿಸಿದ್ದಾರೆ. ಹೀಗಾಗಿ 101 ಜನ ಅಪರಾಧಿಗಳಿಗೆ ಶಿಕ್ಷೆ ವಿಧಿಸಲಾಗಿತ್ತು.