ಬೆಂಗಳೂರು: ನಟ ರಿಷಬ್ ಶೆಟ್ಟಿ(Rishabh Shetty) ಅಭಿನಯದ ‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಭರ್ಜರಿಯಾಗಿ ನಡೆಯುತ್ತಿದೆ. ಆದರೆ, ಚಿತ್ರ ತಂಡದ ವಿರುದ್ಧ ಆರೋಪವೊಂದು(Accusation) ಕೇಳಿ ಬಂದಿದೆ.
ಚಿತ್ರದ ಶೂಟಿಂಗ್ ಕುಂದಾಪುರ ತಾಲೂಕಿನ ಸುತ್ತಮುತ್ತಲಿನ ಪರಿಸರದಲ್ಲಿ(environment) ನಡೆಯುತ್ತಿದೆ. ಶೂಟಿಂಗ್ ಈ ಭಾಗದಲ್ಲಿ ನಡೆಯುತ್ತಿರುವುದಕ್ಕೆ ಜನರು ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ, ಅರಣ್ಯ ಪ್ರದೇಶದಲ್ಲಿ ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿಮಾಡುತ್ತಿರುವ ಆರೋಪ ಕೂಡ ಜನರಿಂದ ಕೇಳಿ ಬಂದಿದೆ. ಅಲ್ಲದೇ, ಸಿನಿಮಾ ತಂಡದ ವಿರುದ್ಧ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನೂ ಗ್ರಾಮಸ್ಥರು ನೀಡಿದ್ದಾರೆ.
‘ಕಾಂತಾರ’ (Kantara)ಯಶಸ್ಸಿನ ನಂತರ ಹೊಂಬಾಳೆ ಫಿಲ್ಮ್ಸ್ ‘ಕಾಂತಾರ 2’ ಚಿತ್ರಕ್ಕೆ ಕೈ ಹಾಕಿದೆ. ಚಿತ್ರದ ಶೂಟಿಂಗ್ ಹಾಗೂ ಅದರ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಕುಂದಾಪುರದಲ್ಲೇ ನಡೆಯುತ್ತಿದೆ.
ಹಾಸನ ಜಿಲ್ಲೆ ಸಕಲೇಶಪುರ(Sakaleshpur) ತಾಲೂಕಿನ ಹೆರೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಶೂಟಿಂಗ್(Shooting) ನಡೆಸಲಾಗುತ್ತಿದೆ. ಶೂಟಿಂಗ್ಗಾಗಿ ಗೋಮಾಳ ಜಾಗದಲ್ಲಿ(Goma’s field) ಅನುಮತಿ ಪಡೆಯಲಾಗಿದೆ. ಆದರೆ, ಅರಣ್ಯ ಜಾಗದಲ್ಲಿ ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿಮಾಡುತ್ತಿರುವ ಆರೋಪವನ್ನು ಗ್ರಾಮಸ್ಥರು ಮಾಡಿದ್ದಾರೆ. ಅಲ್ಲದೇ, ಎಚ್ಚರಿಕೆಯನ್ನು ಕೂಡ ನೀಡಿದ್ದಾರೆ.